ನಟ ಅಕ್ಷಯ್ ಕುಮಾರ್ ಮತ್ತು ಮಾನುಷಿ ಚಿಲ್ಲರ್ ನಟನೆಯ ಬಹುನಿರೀಕ್ಷಿತ ' ಸಾಮ್ರಾಟ್ ಪೃಥ್ವಿರಾಜ್' ಸಿನಿಮಾ ಬಿಡುಗಡೆಗೆ ರೆಡಿಯಿದೆ. ಈ ಚಿತ್ರ ರಿಲೀಸ್‌ಗೆ ಹತ್ತಿರ ಬರುತ್ತಿದ್ದಂತೆ ಅಕ್ಷಯ್ ಕುಮಾರ್ ಮತ್ತು ಚಿತ್ರತಂಡ ವಾರಾಣಸಿಗೆ ತೆರಳಿದ್ದಾರೆ. ಚಿತ್ರದ ಯಶಸ್ಸಿಗಾಗಿ ವಿಶೇಷ ಪೂಜೆ ಮಾಡಿದ್ದಾರೆ. ಈ ಕುರಿತು ಅಕ್ಷಯ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ವಾರಾಣಸಿಯ ಗಂಗಾನದಿಯಲ್ಲಿ ನಿರ್ಮಿಸಿರುವ ಘಾಟ್‌ನಲ್ಲಿ ಅಕ್ಷಯ್ ಕುಮಾರ್ ಮತ್ತು ಮಾನುಷಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಘಾಟ್ ಅನ್ನು ದೀಪಗಳಿಂದ ಅಲಂಕರಿಸಲಾಗಿತ್ತು. ಅಕ್ಷಯ್ ಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಹರಹರ ಮಹಾದೇವ್ ಎಂಬ ಘೋಷಣೆಯನ್ನು ಕೂಗುತ್ತಾ ನದಿಯಲ್ಲಿ ಸ್ನಾನ ಮಾಡುತ್ತಿರುವುದನ್ನು ನೋಡಬಹುದು.