ಹೈದರಾಬಾದ್ (ತೆಲಂಗಾಣ): ಇತ್ತೀಚೆಗಷ್ಟೇ ಮದುವೆಯಾಗಿರುವ ಬಾಲಿವುಡ್ ನಟಿ ಆಲಿಯಾ ಭಟ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಾನು ಗರ್ಭಿಣಿಯಾಗಿದ್ದು, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಖುಷಿ ವಿಚಾರ ಹಂಚಿಕೊಂಡಿದ್ದಾರೆ.
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಎರಡೂವರೆ ತಿಂಗಳ ಹಿಂದೆ, ಅಂದರೆ ಇದೇ ಏಪ್ರಿಲ್ 14ರಂದು ಪ್ರಿಯಕರ ರಣಬೀರ್ ಕಪೂರ್ ಜೊತೆ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಾನು ತಾಯಿ ಆಗುತ್ತಿರುವ ಬಗ್ಗೆ ಬಹಿರಂಗಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಪೋಸ್ಟ್ ಮಾಡಿದ್ದು, ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.
ಆಲಿಯಾ ಭಟ್ ಇನ್ಸ್ಟಾ ಪೋಸ್ಟ್ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಶುಭ ಸಹ ಕೋರಿದ್ದಾರೆ. ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವರದಿಯನ್ನು ಹಂಚಿಕೊಂಡಿರುವ ಬಾಲಿವುಡ್ ತಾರೆ, ಪತಿ ರಣಬೀರ್ ಕಪೂರ್ ಶೀಘ್ರದಲ್ಲೇ ತಂದೆಯಾಗಲಿದ್ದು, ಮೊದಲ ಮಗುವಿಗಾಗಿ ಕಾತರದಿಂದ ಕಾಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಆಲಿಯಾ ಮತ್ತು ರಣಬೀರ್ ಜೊತೆಯಾಗಿ ನಟಿಸಿರುವ ಬ್ರಹ್ಮಾಸ್ತ್ರ ಚಿತ್ರವು ಸೆಪ್ಟೆಂಬರ್ 9 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಆರ್ಆರ್ಆರ್ ಸಿನಿಮಾ ಬಳಿಕ ಅವರು ಪ್ಯಾನ್ ಇಂಡಿಯಾ ಹೀರೋಯಿನ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಖುಷಿಯ ಮಧ್ಯೆ ಇದೊಂದು ಹೊಸ ಖುಷಿ ಸೇರ್ಪಡೆಯಾಗಿದ್ದು, ಅವರ ಅಭಿಮಾನಿಗಳಿಗೆ ಇದು ಡಬಲ್ ಧಮಾಕಾ ಆಗಿದೆ.
ಆಲಿಯಾ ಭಟ್ ಮತ್ತು ರಣಬೀರ್ ಕಪೂರ್