ಹೈದರಾಬಾದ್ :ಕಳೆದ ಐದು ದಿನಗಳ ಹಿಂದೆ ಮುಂಬೈನ ಬಾಂದ್ರಾದಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಬಾಲಿವುಡ್ನ ಪ್ರಣಯ ಪಕ್ಷಿಗಳಾದ ರಣಬೀರ್ ಕಪೂರ್ ಮತ್ತು ನಟಿ ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಬೆನ್ನಲ್ಲೇ ಈ ಜೋಡಿ ಹನಿಮೂನ್‌ಗೋಸ್ಕರ ತೆರಳುತ್ತಾರೆಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಇದೀಗ ಆ ನಿರೀಕ್ಷೆ ಹುಸಿಯಾಗಿದೆ.
ಮದುವೆ ಬೆನ್ನಲ್ಲೇ ನಟಿ ಆಲಿಯಾ ಭಟ್ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದು, ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಆಲಿಯಾ ಕಳಿಂಗ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.