ದೇಶಾದ್ಯಂತ ಬೆಳಕಿನ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಶನಿವಾರದಂದು ಇಂಡಿಯನ್ ಕ್ರಿಕೆಟ್ ಟೀಮ್ ಬೆಂಗಳೂರಿನ ಹೋಟೆಲ್ ಒಂದರಲ್ಲಿ ದೀಪಾವಳಿ ಹಬ್ಬ ಆಚರಿಸಿದೆ. ಪವರ್ಫುಲ್ ಕಪಲ್ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಸುಂದರ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದರು.
ಆನ್‌ಲೈನ್‌ನಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೇಬಿ ಬಂಪ್ ಮರೆಮಾಡಲೆತ್ನಿಸಿದ್ದನ್ನು ಕಾಣಬಹುದು. ಅನುಷ್ಕಾ ಶರ್ಮಾ ಪ್ರೆಗ್ನೆಂಟ್ ಎಂಬ ಸುದ್ದಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದು, ಹೊಸ ವಿಡಿಯೋ ಊಹಾಪೋಹಗಳಿಗೆ ತುಪ್ಪ ಸುರಿದಿದೆ. ವಿರುಷ್ಕಾ ಜೋಡಿ ಶೀರ್ಘದಲ್ಲೇ ಎರಡನೇ ಮಗುವನ್ನು ಸ್ವಾಗತಿಸಲಿದ್ದಾರೆ ಎಂದು ಅಭಿಮಾನಿಗಳು ಪೋಸ್ಟ್ ಮಾಡುತ್ತಿದ್ದಾರೆ.
ವಿಶ್ವಕಪ್ನ ಲೀಗ್ ಹಂತದ ಕೊನೆ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವೆ ಇಂದು ನಡೆಯಲಿದೆ. ಬೆಂಗಳೂರಿನಲ್ಲಿರುವ ಭಾರತ ಕ್ರಿಕೆಟ್ ಟೀಮ್ ಆಟಗಾರರು ನಿನ್ನೆ ಸಂಜೆ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಈವೆಂಟ್ನ ಫೋಟೋ, ವಿಡಿಯೋಗಳು ಸಖತ್ ಸದ್ದು ಮಾಡುತ್ತಿವೆ.
ನವೆಂಬರ್ 11 ರಂದು ನಡೆದ ದೀಪಾವಳಿ ಹಬ್ಬದ ಆಚರಣೆಯಲ್ಲಿ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಜೊತೆ ಪತ್ನಿ ಅನುಷ್ಕಾ ಶರ್ಮಾ ಸಹ ಭಾಗವಹಿಸಿ ಸಮಾರಂಭದ ಮೆರುಗು ಹೆಚ್ಚಿಸಿದರು. ಅನುಷ್ಕಾ ಶರ್ಮಾ ಮಿನಿಮಮ್ ಮೇಕ್ಅಪ್ನಲ್ಲಿ ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಗುಲಾಬಿ - ನೇರಳೆ ಕುರ್ತಾ ಸೆಟ್, ದುಪ್ಪಟ್ಟಾ ಧರಿಸಿ ಆಗಮಿಸಿದ್ದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಗ್ರೀನ್ ಕುರ್ತಾ ಸೆಟ್ನಲ್ಲಿ ಸಾಂಪ್ರದಾಯಿಕ ನೋಟ ಬೀರಿದರು. ದೀಪಾವಳಿ ಈವೆಂಟ್ ನಡೆದ ಹೋಟೆಲ್‌ಗೆ ಜನಪ್ರಿಯ ದಂಪತಿ ಆಗಮಿಸಿರುವ ವಿಡಿಯೋ ವೈರಲ್ ಆಗಿದೆ. ಇಲ್ಲಿ ಎಲ್ಲರ ಗಮನ ಸೆಳೆದಿದ್ದು ಅನುಷ್ಕಾ ಶರ್ಮಾ ಬೇಬಿ ಬಂಪ್.