ಕರ್ನಾಟಕ

karnataka

ETV Bharat / entertainment

ರಕ್ತಾಕ್ಷ ಸಿನಿಮಾ: 'ಅರೆಸ್ಟ್ ಮಿ ಬೇಬಿ' ಎಂದ ಜವಾರಿ ಹೈದ ರೋಹಿತ್ - rohit

Arrest Me Baby Song Release: ರಕ್ತಾಕ್ಷ ಚಿತ್ರದ 'ಅರೆಸ್ಟ್ ಮಿ ಬೇಬಿ' ಸಾಂಗ್​ ರಿಲೀಸ್​ ಆಗಿದೆ.

Arrest Me Baby Song Release
ಅರೆಸ್ಟ್ ಮಿ ಬೇಬಿ ಸಾಂಗ್​​​ ರಿಲೀಸ್​​

By ETV Bharat Karnataka Team

Published : Oct 1, 2023, 7:05 AM IST

ಕನ್ನಡ ಚಿತ್ರರಂಗಕ್ಕೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಹೊಸ ಪ್ರತಿಭೆಗಳ ಆಗಮನವಾಗುತ್ತಿದೆ. ರೋಹಿತ್ ಎಂಬ ಹೊಸ ಪ್ರತಿಭೆ ಬಾಡಿ ಬಿಲ್ಡ್ ಮಾಡಿಕೊಂಡು ರಕ್ತಾಕ್ಷ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಕ್ತಾಕ್ಷ ಎಂಬ ಮಾಸ್ ಟೈಟಲ್ ಹೊಂದಿರುವ ಚಿತ್ರ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.

ಅರೆಸ್ಟ್ ಮಿ ಬೇಬಿ: ಸದ್ಯ ರಕ್ತಾಕ್ಷ ಚಿತ್ರದ ಹಾಡೊಂದು ಅನಾವರಣಗೊಂಡಿದೆ. ಅರೆಸ್ಟ್ ಮಿ ಬೇಬಿ ಎನ್ನುತ್ತಾ ಉತ್ತರ ಕರ್ನಾಟಕದ ಜವಾರಿ ಹೈದ ರೋಹಿತ್ ಜಬರ್ದಸ್ತ್ ಸಾಂಗ್​​ಗೆ ಹೆಜ್ಜೆ ಹಾಕಿದ್ದಾರೆ. ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಡುತ್ತಿರುವ ರೋಹಿತ್ ನಟನಾಗಿ ಮಾತ್ರವಲ್ಲದೇ, ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಟೀಸರ್​​ನಲ್ಲಿ ಜಬರ್ದಸ್ತ್ ಆ್ಯಕ್ಷನ್ ಪ್ರದರ್ಶಿಸಿದ್ದ ಈ ಜವಾರಿ ಹೈದ ಹಾಡಿನಲ್ಲಿ ಕಿಕ್ ಏರಿಸಿದ್ದಾರೆ.

ಅರೆಸ್ಟ್ ಮಿ ಬೇಬಿ ಸಾಂಗ್​​​ ರಿಲೀಸ್​​

ರೋಹಿತ್ ಕುಣಿದಿರುವ ಅರೆಸ್ಟ್ ಮಿ ಬೇಬಿ ಹಾಡಿಗೆ ಸುಜಿತ್ ವೆಂಕಟರಾಮಯ್ಯ ಪದ ಪೋಣಿಸಿದ್ದು, ಸುಪ್ರಿಯಾ ರಾಮ್ ಕಂಠದಾನ ಮಾಡಿದ್ದಾರೆ. ಡೋಸ್ಮೋಡ್ ಸಂಗೀತ ಒದಗಿಸಿದ್ದಾರೆ. ಪಕ್ಕಾ ಉತ್ತರ ಕರ್ನಾಟಕದ ಸ್ಟೈಲ್​ನಲ್ಲಿ ಮೂಡಿಬಂದಿರುವ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ.

ಚೊಚ್ಚಲ ಚಿತ್ರ: ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. 'ರಕ್ತಾಕ್ಷ' ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಹೀರೋ ಆಗಿರುವ ಜೊತೆಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ರಕ್ತಾಕ್ಷ ಸಿನಿಮಾವನ್ನು ನಿರ್ಮಾಣ ಸಹ ಮಾಡುತ್ತಿದ್ದಾರೆ. ವಾಸುದೇವ ಎಸ್.ಎನ್ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ರೋಹಿತ್ ಜೊತೆ ವಾಸುದೇವ್ ಅವರಿಗೂ ಇದು ಚೊಚ್ಚಲ ಚಿತ್ರ. ರೋಹಿತ್, ವಾಸುದೇವ್ ಜೊತೆಗೆ ಇನ್ನೊಂದಿಷ್ಟು ಹೊಸ ಪ್ರತಿಭೆಗಳು ಚಿತ್ರಕ್ಕೆ ಕೈ ಜೋಡಿಸಿದ್ದಾರೆ. ಧೀರೇಂದ್ರ ಡಾಸ್ ಈ ಸಿನಿಮಾಕ್ಕೆ ಸಂಗೀತ ಒದಗಿಸಿದ್ದಾರೆ.

ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದರೆ, ಸಂಗೀತವನ್ನು ಧೀರೇಂದ್ರ ಡಾಸ್ ನೀಡಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ಗುರುದೇವ್ ನಾಗರಾಜ, ರಾಮಣ್ಣ, ವಿಲಾಸ್, ಪ್ರಭು, ವಿಶ್ವ, ಭದ್ರಿ, ನಾರಾಯಣ, ಬಸವರಾಜ ಆದಾಪುರ್, ಭರತ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಖಳನಾಯಕನ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ರಕ್ತಾಕ್ಷ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ವಸಿಷ್ಠ ಸಿಂಹ ಹಾಡಿದ್ದು, ಈಗಾಗಲೇ ಹಾಡು ಉತ್ತಮ ಪ್ರತಿಕ್ರಿಯೆ ಸ್ವೀಕರಿಸಿದೆ.

ಇದನ್ನೂ ಓದಿ:ಸರ್ವರಿಗೂ ಸಮಪಾಲು, ಸಮಬಾಳು ಸಂದೇಶ ಸಾರಿದ ತೋತಾಪುರಿ 2: ಸಿನಿಮಾ ಮೆಚ್ಚಿದ ಪ್ರೇಕ್ಷಕರು

ಜನೋಪಕಾರಿ ಕೆಲಸದಲ್ಲಿ ರೋಹಿತ್:ಸಿನಿಮಾ ಜೊತೆಗೆ ರೋಹಿತ್ ಸಾಮಾಜಿಕ ಕೆಲಸಕ್ಕಿಳಿದ್ದಾರೆ. ಆಗಸ್ಟ್ 15ರಂದು ರೋಹಿತ್ ತಮ್ಮ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದರು. ಉತ್ತರ ಕರ್ನಾಟಕದ ಭಾಗದವರೇ ಆದ ರೋಹಿತ್ ಮಸ್ಕಿ, ಲಿಂಗಸುಗೂರು, ಸಿಂಧನೂರು ಜನತೆಯೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದರ ಜೊತೆಗೆ ಅಲ್ಲಿನ ವಿವಿಧ ವರ್ಗದ ಜನರಿಗೆ ಕೈಲಾದ ಸಹಾಯ ಮಾಡಿದ್ದರು. ಜೊತೆಗೆ ಅದೇ ಭಾಗದ ಅನಾಥಾಶ್ರಮಗಳಿಗೆ ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಿದ್ದರು. ಅಂದ ಹಾಗೇ ರೋಹಿತ್ ಇದೇ‌ ಮೊದಲ ಬಾರಿಗೆ ಸಾಮಾಜಿಕ ಸೇವೆಗಿಳಿದಿಲ್ಲ. ಹೀರೋ ಆಗಿ ಹೊಸ ಪಯಣ ಆರಂಭಿಸುವುದಕ್ಕೂ ಮುನ್ನ ಅಂದರೆ 2014ರಿಂದಲೂ ಜನೋಪಕಾರಿ ಕೆಲಸ ಮಾಡುತ್ತಿದ್ದು, ಅಕ್ಷಯಪಾತ್ರ, ಅದಮ್ಯಚೇತನ, ಯೂನಿಸೆಫ್​ಗೆ ಡೋನರ್ ಕೂಡ ಹೌದು. ಈ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ:ಮಾಫಿಯಾ: ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅದಿತಿ ಪ್ರಭುದೇವ - ನವೆಂಬರ್ ಕೊನೆಗೆ ಸಿನಿಮಾ ಬಿಡುಗಡೆ

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅನಾಥಾಶ್ರಮಕ್ಕೆ ಅಪ್ಪು ಅವರ ಹೆಸರಿನಲ್ಲಿ ಕಳೆದ ಒಂದು ವರ್ಷದಿಂದ ಪ್ರತೀ ತಿಂಗಳು ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದೀಗ ತಮ್ಮದೇ ಸಾಯಿ ಪ್ರೊಡಕ್ಷನ್ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮಾಜಿಕ ಕೆಲಸ ಮುಂದುವರೆಸಿದ್ದಾರೆ.

ABOUT THE AUTHOR

...view details