ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ದೊಡ್ಮನೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಅಪ್ಪು ನೆನೆದು ಪತ್ನಿ ಅಶ್ವಿನಿ ಭಾವುಕರಾದರು. ಶಿವರಾಜ್ಕುಮಾರ್ ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು. ಇನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಪುನೀತ್ ರಾಜ್ ಕುಮಾರ್ ಅವರನ್ನು ನೆನೆದು ಟ್ವೀಟ್ ಮಾಡಿದ್ದಾರೆ.
ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ. ಡಾ ಪುನೀತ್ ರಾಜ್‌ಕುಮಾರ್ ಅವರ ಪುಣ್ಯತಿಥಿಯಂದು ನಾನು ಅವರನ್ನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ. ಅವರ ಚಲನಚಿತ್ರಗಳು, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ನಮ್ಮ ಬಳಿಯೇ ಇದ್ದಾರೆ. ಅವರು ಎಂದಿಗೂ ನಮ್ಮನ್ನು ತೊರೆದಿಲ್ಲ ಎಂದು ನಮಗೆ ಅನಿಸುತ್ತದೆ. ಅವರು ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಅಂತಾ ಮೊದಲ ಸಾಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.