ಕರ್ನಾಟಕ

karnataka

ETV Bharat / entertainment

ಕಾಂತಾರ ರೀತಿ 'ರೇಮೊ' ಹಿಟ್​ ಆಗಲಿ.. ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ ಹ್ಯಾಟ್ರಿಕ್ ಹೀರೋ - ರೇಮೊ ಚಿತ್ರದ ಟ್ರೇಲರ್ ಬಿಡುಗಡೆ

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ರೇಮೊ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.

Raymo Trailer released by Shivarajkumar
ರೇಮೊ ಟ್ರೇಲರ್ ಬಿಡುಗಡೆ ಸಮಾರಂಭ

By

Published : Nov 7, 2022, 12:01 PM IST

ನಿರ್ದೇಶಕ ಪವನ್‌ ಒಡೆಯರ್ ನಿರ್ದೇಶನದ ಇಶಾನ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ಚಿತ್ರ 'ರೇಮೊ'. ಪೋಸ್ಟರ್ ಹಾಗೂ ಟೀಸರ್​​ನಿಂದಲೇ ಕ್ರೇಜ್ ಹುಟ್ಟುಸಿರುವ ಈ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಯಹಸ್ತ ನೀಡಿದ್ಧಾರೆ.

ರೇಮೊ ಟ್ರೇಲರ್ ಬಿಡುಗಡೆ ಸಮಾರಂಭ

ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ಶಿವರಾಜ್ ​ಕುಮಾರ್, 'ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. 'ಕಾಂತಾರ' ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. 'ರೇಮೊ' ಕೂಡ ಅದೇ ರೀತಿ ಸೂಪರ್ ಹಿಟ್ ಆಗಲಿ ಅಂತಾ ದೇವರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಇಶಾನ್ ಹಾಗೂ ಆಶಿಕಾ ಮುದ್ದಾಗಿ ಕಾಣುತ್ತಿದ್ದಾರೆ. ನಿರ್ದೇಶಕ ಪವನ್ ಒಡೆಯರ್ ಬಗ್ಗೆ ಹೇಳುವಂತೆಯೇ ಇಲ್ಲ. ಸಿ.ಆರ್ ಮನೋಹರ್ ಅವರಂತಹ ನಿರ್ಮಾಪಕರು ಕನ್ನಡ ಚಿತ್ರರಂಗಕ್ಕೆ ಬೇಕು' ಎಂದರು

ಆಶಿಕಾ ರಂಗನಾಥ್ ಹಾಗೂ ಇಶಾನ್​

ನಾಯಕ‌ ಇಶಾನ್ ಮಾತನಾಡಿ, 'ರೇಮೊ ಚಿತ್ರದ ಕೆಲಸ ಶುರುವಾಗಿ 3 ವರ್ಷ ಆಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನನ್ನನ್ನು ಚಿತ್ರರಂಗಕ್ಕೆ ಬರಲು ಹೇಳಿದ್ದು ಶಿವಣ್ಣ. ಇಂದು ಅವರಿಂದಲೇ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ. ನಮ್ಮ ಚಿತ್ರವನ್ನು ನೋಡುವುದಾಗಿ ಶಿವಣ್ಣ ಹೇಳಿದ್ದಾರೆ. ಅವರೇ ನನಗೆ ಸ್ಫೂರ್ತಿ. ನಾನು ಎಷ್ಟೇ ಸಿನಿಮಾ ಮಾಡಬಹುದು. ಆದರೆ ರೇಮೊ ಚಿತ್ರ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ ಎಂದರು.

ಇದನ್ನೂ ಓದಿ:ಮೂರು ಭಾಷೆಗಳಲ್ಲಿ ಬಿಡುಗಡೆಯಾಗ್ತಿದೆ ಇಶಾನ್​​​-ಆಶಿಕಾ ಅಭಿನಯದ 'ರೇಮೊ'

'ಇಷ್ಟು ದಿನ ನನ್ನನ್ನು ಕ್ಯೂಟ್ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಆದರೆ ಈ ಸಿನಿಮಾದಲ್ಲಿನ ಪಾತ್ರ ಭಿನ್ನವಾಗಿದೆ. ಈವರೆಗೆ ನಾನು ಮಾಡಿದ ಪಾತ್ರಗಳಲ್ಲಿ ಇದೇ ಬೆಸ್ಟ್. ಹೀರೋಗೆ ಸಮನಾಗಿ ಇರುವಂತಹ ಪಾತ್ರ ನನಗೆ ಸಿಕ್ಕಿದೆ. ಅದಕ್ಕೆ ನನ್ನನ್ನು ಆಯ್ಕೆ ಮಾಡಿದ ಪವನ್ ಒಡೆಯರ್ ಅವರಿಗೆ ಧನ್ಯವಾದಗಳು' ಎನ್ನುತ್ತಾರೆ ನಟಿ ಆಶಿಕಾ ರಂಗನಾಥ್.

'ಪ್ರೀತಿಯಲ್ಲಿ ಹಲವು ವಿಧಗಳಿದೆ. ಅದರಲ್ಲಿ ನಾನು ಮ್ಯೂಸಿಕಲ್ ಲವ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದೇನೆ. ಈ ಚಿತ್ರದಲ್ಲಿ ಎಮೋಷನ್ ಸಹ ಇದೆ. ವೈದಿ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರವನ್ನು ಮತ್ತಷ್ಟು ಸುಂದರವಾಗಿಸಿದೆ. ಇಶಾನ್ ಹಾಗೂ ಆಶಿಕಾ ರಂಗನಾಥ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಟ್ರೇಲರ್ ಬಿಡುಗಡೆ ಮಾಡಿದ ಶಿವರಾಜ್​ ಕುಮಾರ್ ಅವರಿಗೆ ಧನ್ಯವಾದ' ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದರು.

ಅದ್ದೂರಿ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ನಿರ್ಮಾಪಕ ಸಿ.ಆರ್ ಮನೋಹರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ, ವೈದಿ ಛಾಯಾಗ್ರಹಣ, ಕೆ.ಎಂ ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನ.25 ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ:ಇಶಾನ್ - ಆಶಿಕಾ ಜೋಡಿಯ ರೇಮೊ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

ABOUT THE AUTHOR

...view details