ಇಂದು ಜಾಗತಿಕ ಮಟ್ಟದಲ್ಲಿ ತನ್ನದೇ ಛಾಪು ಮೂಡಿಸಿರುವ ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ತಂದೆ ಅಶೋಕ್ ಚೋಪ್ರಾ ಜನ್ಮ ದಿನ. ದಿ.ಅಶೋಕ್ ಚೋಪ್ರಾ ಅವರೊಂದಿಗೆ ತೆಗೆಸಿಕೊಂಡಿರುವ ಬಾಲ್ಯದ ಫೋಟೋವನ್ನು ನಟಿ ಪ್ರಿಯಾಂಕಾ ಚೋಪ್ರಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.
ನಟಿ ಪ್ರಿಯಾಂಕಾ ಚೋಪ್ರಾ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ಚಿತ್ರವು ಅವರ ಬಾಲ್ಯದ ದಿನದ್ದಾಗಿದೆ. ಈ ಚಿತ್ರವು ಕಾಶ್ಮೀರದಲ್ಲಿ ತೆಗೆಸಿದ ಫೋಟೋ ಎಂದು ಸ್ವತಃ ಪ್ರಿಯಾಂಕಾ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಈ ಫೋಟೋದಲ್ಲಿ ಚಿತ್ರದಲ್ಲಿ ಪ್ರಿಯಾಂಕಾ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.
ಜನ್ಮದಿನದ ಶುಭಾಶಯಗಳು ಪಪ್ಪಾ, ಪ್ರತಿದಿನ ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇವೆ ಎಂದು ಬರೆದಿದ್ದಾರೆ. ಪತಿ ನಿಕ್ ಜೋನಸ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಹ ಚಿತ್ರವನ್ನು ಇಷ್ಟಪಟ್ಟಿದ್ದಾರೆ.
ಇದನ್ನೂ ಓದಿ:2 ವರ್ಷಗಳ ನಂತರ ಇಂಡಿಯನ್ 2 ಚಿತ್ರೀಕರಣ ಪುನರಾರಂಭ
2013ರಲ್ಲಿ ಪ್ರಿಯಾಂಕಾ ಚೋಪ್ರಾ ಅವರ ತಂದೆ ಅಶೋಕ್ ಚೋಪ್ರಾ ನಿಧನರಾದರು. ಬಳಿಕ ತಾಯಿ ಮಧು ಅವರು ಪ್ರಿಯಾಂಕಾ ಅವರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡರು. 2018ರಲ್ಲಿ ರಾಯಲ್ ವೆಡ್ಡಿಂಗ್ನಲ್ಲಿ ನಿಕ್ ಜೋನಸ್ ಮತ್ತು ಪ್ರಿಯಾಂಕಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ತಾರಾ ದಂಪತಿಯೀಗ ಮುದ್ದಾದ ಹೆಣ್ಣು ಮಗುವಿನ ಪೋಷಕರೂ ಹೌದು.