ಕರ್ನಾಟಕ

karnataka

ETV Bharat / entertainment

'ಬ್ಯಾಡ್ ಮ್ಯಾನರ್ಸ್' ಬಿಡುಗಡೆಗೆ ದಿನಗಣನೆ: ಪ್ರಚಾರ ಜೋರು, ದರ್ಶನ್​ ಸಾಥ್ - ಬ್ಯಾಡ್ ಮ್ಯಾನರ್ಸ್

'ಬ್ಯಾಡ್ ಮ್ಯಾನರ್ಸ್' ಚಿತ್ರತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ.

Bad manners movie
ಬ್ಯಾಡ್ ಮ್ಯಾನರ್ಸ್ ಸಿನಿಮಾ

By ETV Bharat Karnataka Team

Published : Nov 16, 2023, 3:40 PM IST

ದುನಿಯಾ ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಟನೆಯ ಮಾಸ್ ಎಂಟರ್​ಟೈನ್ಮೆಂಟ್ ಸಿನಿಮಾ 'ಬ್ಯಾಡ್ ಮ್ಯಾನರ್ಸ್'. ಹಾಡುಗಳಿಂದ ಸ್ಯಾಂಡಲ್​​ವುಡ್​ನಲ್ಲಿ ಟಾಕ್ ಆಗುತ್ತಿರುವ ಬ್ಯಾಡ್ ಮ್ಯಾನರ್ಸ್ ಚಿತ್ರದ ಆಫೀಶಿಯಲ್ ಟ್ರೇಲರ್​​ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಾವರಣಗೊಳಿಸಿ ಚಿತ್ರದ ಯಶಸ್ಸಿಗೆ ಶುಭ ಕೋರಿದರು. ಸುಮಲತಾ ಅಂಬರೀಶ್, ರಾಕ್​ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಸೇರಿದಂತೆ ಹಲವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದರು. ಜಿ.ಟಿ ಮಾಲ್​​ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾಗಿದ್ದರು. ಈ ಕಾರ್ಯಕ್ರಮದ ಮೇಕಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ನೀವೆಲ್ಲ ಟ್ರೇಲರ್ ನೋಡಿದ್ದೀರ, ನಾನು ಸಿನಿಮಾವನ್ನೇ ನೋಡಿದ್ದೇನೆ ಎಂದು ಮಾತು ಶುರು ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೂರಿ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಅಭಿಷೇಕ್ ಬಹಳ ಮುದ್ದಾಗಿ ಕಾಣುತ್ತಾರೆ. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ. ನವೆಂಬರ್ 24 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರಮಂದಿಗಳಿಗೆ ಹೋಗಿ ಈ ಸಿನಿಮಾ ನೋಡಿ ಎಂದು ದರ್ಶನ್​​ ಅಭಿಮಾನಿಗಳಲ್ಲಿ ಕೇಳಿಕೊಂಡರು.

ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ನಮ್ಮ ಕುಟುಂಬದ ಮೇಲೆ ನೀವಿಟ್ಟಿರುವ ಪ್ರೀತಿಗೆ ಧನ್ಯವಾದ. ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂದ ಮೇಲೆ ಕಥೆ ಕೇಳಲಿಲ್ಲ. ಅವರು ಉತ್ತಮ ಕಥೆ ಮಾಡಿಕೊಂಡಿರುತ್ತಾರೆ ಎಂಬ ನಂಬಿಕೆ ನನಗಿದೆ. ಇದೇ ತಿಂಗಳು ನನ್ನ ಮಗನ ಸಿನಿಮಾ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಆಶೀರ್ವಾದ ಅಭಿಷೇಕ್ ಮೇಲಿರಲಿ ಎಂದು ಕೇಳಿಕೊಂಡರು.

ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ಈ ಸಂದರ್ಭದಲ್ಲಿ ನಾನು ಅಂಬರೀಶ್ ಹಾಗೂ ಪುನೀತ್ ರಾಜಕುಮಾರ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದರ್ಶನ್ ಅವರಿಗೆ ಧನ್ಯವಾದಗಳು. ನನ್ನ ಚಿತ್ರತಂಡದ ಸಹಕಾರದಿಂದ ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಅಭಿಷೇಕ್ ಅವರ ಪಾತ್ರ ಈ ಚಿತ್ರದಲ್ಲಿ ವಿಭಿನ್ನವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ ವಾಸುಕಿ ವೈಭವ್

ನಂತರ ಅಭಿಷೇಕ್ ಅಂಬರೀಷ್ ಮಾತನಾಡಿ, ಬ್ಯಾಡ್ ಮ್ಯಾನರ್ಸ್ ನನ್ನ ಅಭಿನಯದ ಎರಡನೇ ಚಿತ್ರ. ನಿರ್ಮಾಪಕ ಸುಧೀರ್, ನಿರ್ದೇಶಕ ಸೂರಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ನನ್ನ ಅಣ್ಣ ದರ್ಶನ್ ಅವರಿಗೆ ಹಾಗೂ ಇಲ್ಲಿ ಅಗಮಿಸಿರುವ ಪ್ರತಿಯೊಬ್ಬ ಸ್ನೇಹಿತರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು. ಅಭಿಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ಕುಮಾರ್ ನಾಯಕಿಯರಾಗಿ ಜೊತೆಯಾಗಿದ್ದಾರೆ.

ಇದನ್ನೂ ಓದಿ:200 ಕೋಟಿಯತ್ತ ಸಲ್ಮಾನ್​​ ಕತ್ರಿನಾ ನಟನೆಯ 'ಟೈಗರ್ 3': ಕಲೆಕ್ಷನ್​ ಡೀಟೆಲ್ಸ್ ಇಲ್ಲಿದೆ

ಚಿತ್ರಕ್ಕೆ ನಿರ್ಮಾಪಕ ಕೆ.ಎಂ ಸುಧೀರ್ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ನೀಡಿದ್ದು, ಶೇಖರ್ ಎಸ್ ಅವರ ಕ್ಯಾಮರಾ ವರ್ಕ್ ಇದೆ. ದೀಪು ಎಸ್ ಕುಮಾರ್ ಸಂಕಲನವಿದೆ. ಹಿರಿಯ ನಟರಾದ ಉಮೇಶ್, ದತ್ತಣ್ಣ, ಶರತ್ ಲೋಹಿತಾಶ್ವ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ಟ್ರೇಲರ್ ಬಿಡುಗಡೆ ಸಮಾರಂಭದಕ್ಕೆ ಸಾಕ್ಷಿಯಾದರು. ಸದ್ಯ ಟ್ರೇಲರ್​ನಿಂದ ಸದ್ದು ಮಾಡುತ್ತಿರುವ ಬ್ಯಾಡ್ ಮ್ಯಾನರ್ಸ್ ಚಿತ್ರ ಇದೇ ತಿಂಗಳು 24ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ABOUT THE AUTHOR

...view details