ಕೋಲ್ಕತ್ತಾ(ಪಶ್ಚಿಮ ಬಂಗಾಳ): 'ಪಠಾಣ್' ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೆ ಸಿಲುಕಿರುವುದರೊಂದಿಗೆ ಚಿತ್ರವನ್ನು ಬಾಯ್ಕಾಟ್ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಚಿತ್ರದ ನಾಯಕ ಶಾರುಖ್ ಖಾನ್ ಮೊದಲ ಬಾರಿಗೆ ಈ ವಿವಾದದ ಬಗ್ಗೆ ಮಾತನಾಡಿದ್ದು, ಸಾಮಾಜಿಕ ಜಾಲತಾಣಗಳ ಬಳಕೆ ನಕಾರಾತ್ಮಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.
ಡಿ.12ರಂದು 'ಪಠಾಣ್' ಚಿತ್ರದ ಮೊದಲ ಹಾಡು 'ಬೇಷರಮ್ ರಂಗ್' ಆನ್‌ಲೈನ್‌ನಲ್ಲಿ ಬಿಡುಗಡೆಯಾಗಿದೆ. ಹಾಡಿನಲ್ಲಿ ನಾಯಕಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಿಕಿನಿ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಿವೆ. ಅಷ್ಟೇ ಅಲ್ಲ, ಚಿತ್ರವನ್ನು ಬಾಯ್ಕಾಟ್ ಅರ್ಥಾತ್ ಬಹಿಷ್ಕರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯವೂ ಕೇಳಿ ಬರುತ್ತಿದೆ.