'ಘೋಸ್ಟ್'. ಶೀರ್ಷಿಕೆಯಿಂದಲೇ ಕನ್ನಡ ಮಾತ್ರವಲ್ಲದೇ ಇಡೀ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ. ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ಬರಲಿದೆ ಎನ್ನುವ ಪಾಸಿಟಿವ್ ವೈಬ್ಸ್ ಕ್ರಿಯೇಟ್ ಮಾಡಿರೋ ಚಿತ್ರವಿದು. ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿರುವ ಘೋಸ್ಟ್ ಬಹುತೇಕ ಚಿತ್ರೀಕರಣ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ. ಮೋಷನ್ ಪೋಸ್ಟರ್ನಿಂದಲೇ ಟಾಕ್ ಆಗುತ್ತಿರುವ ಘೋಸ್ಟ್ ಸಿನಿಮಾ ಯಾವಾಗ ಬಿಡುಗಡೆ ಆಗುತ್ತೆ ಅಂತಾ ಅಭಿಮಾನಿಗಳು ಕಾದು ಕುಳಿತಿದ್ದಾರೆ.
"BIG DADDY" ಸ್ಪೆಷಲ್ ವಿಡಿಯೋ: ಜುಲೈ 12 ಕರುನಾಡ ಚಕ್ರವರ್ತಿ ಶಿವ ರಾಜ್ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹೀರೋ ಅಭಿನಯಿಸಿರೋ ಬಹು ನಿರೀಕ್ಷಿತ "ಘೋಸ್ಟ್" ಚಿತ್ರತಂಡದಿಂದ ವಿಶೇಷ ವಿಡಿಯೋವೊಂದು ಅನಾವರಣಗೊಳ್ಳಲಿದೆ. "BIG DADDY" ಎಂಬ ಸ್ಪೆಷಲ್ ವಿಡಿಯೋ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ. ಹೌದು, ಈ BIG DADDY ವಿಡಿಯೋವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರ ನಿರ್ಮಾಪಕರು ನಿರ್ಧರಿಸಿದ್ದಾರೆ.
ಮೂರು ಭಾಷೆಗಳಲ್ಲಿ 'ಘೋಸ್ಟ್': ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ 'ಘೋಸ್ಟ್' ಚಿತ್ರ ತೆರೆಕಾಣಲಿದೆ. ಸದ್ಯ ಶಿವಣ್ಣನ ಲುಕ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರದಲ್ಲಿ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.