ಕರ್ನಾಟಕ

karnataka

ETV Bharat / entertainment

ತುಳುನಾಡ ದೈವ ಕೊರಗಜ್ಜ ಚಿತ್ರದಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ ನಟನೆ - ETV bharat

ಬಾಲಿವುಡ್ ತಾರೆಯರು ಕನ್ನಡ ಚಿತ್ರರಂಗಕ್ಕೆ ಬರುವ ವಾಡಿಕೆ ಅರವತ್ತು ಎಪ್ಪತ್ತು ದಶಕದಿಂದಲೂ ಇದೆ. ಸುಧೀರ್ ಅತ್ತಾವರ್ ನಿರ್ದೇಶನದ ‘ಕರಿ ಹೈದ ಕರಿ ಅಜ್ಜ’ ಸಿನಿಮಾದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ.

bollywood-actor-kabir-beddi-acting-in-tulu-movie
ತುಳುನಾಡ ದೈವ ಕೊರಗಜ್ಜ ಚಿತ್ರದಲ್ಲಿ ಬಾಲಿವುಡ್ ನಟ ಕಬೀರ್ ಬೇಡಿ

By

Published : Dec 6, 2022, 6:08 AM IST

ಯುರೋಪಿನಾದ್ಯಂತ ಪ್ರಸಿದ್ಧಿ ಪಡೆದ ಸಂದೀಕನ್ ಟಿವಿ ಸೀರಿಸ್​ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಈಗ ತುಳು ಸಿನಿಮಾ ಕರಿ ಹೈದ ಕರಿ ಅಜ್ಜ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಕಬೀರ್ ಬೇಡಿ ಮಾತನಾಡಿದ್ದಾರೆ.

‘‘ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. "ಕೊರಗಜ್ಜ" ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರ ನನ್ನದು’’ ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡರು.‌

ಕೊರಗಜ್ಜನ ಜೀವನದ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿ, ಕೊರಗಜ್ಜನ ಜನಾಂಗದ ಮಹನೀಯರೊಂದಿಗೆ ಚರ್ಚೆ ಮಾಡಿ 12ನೇ ಶತಮಾನದಲ್ಲಿದ್ದ ಕೊರಗಜ್ಜನ ಬಗ್ಗೆ ಯಾರಿಗೂ ಗೊತ್ತಿರದ ನಿಜ ಬದುಕಿನ ವಿಷಯವನ್ನು ತಿಳಿಸುವ ಪ್ರಯತ್ನ ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ ಎಂದು ನಿರ್ದೇಶಕ ಸುಧೀರ್​ ಅತ್ತಾವರ್​ ಹೇಳಿದರು.

ಭರತ್ ಸೂರ್ಯ "ಕೊರಗಜ್ಜ"ನ ಪಾತ್ರದಲ್ಲಿ ಕಾಣಿಸಿಕೊಳುತ್ತಿದ್ದಾರೆ. ವಿದ್ಯಾಧರ್ ಶೆಟ್ಟಿ ಸಂಕಲನದ ಜೊತೆಗೆ ಇತಿಹಾಸದ ದಾಖಲೆ ಮತ್ತು ಪುರಾವೆಗಳನ್ನು ಕಲೆ ಹಾಕಿದ್ದಾರೆ. ಪವನ್ ವಿ ಕುಮಾರ್ ಮತ್ತು ಗಣೇಶ್ ಕೆಳಮನೆ ಛಾಯಾಗ್ರಹಣ, ಸುಧೀರ್- ಕೃಷ್ಣ ರವಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ಮಾಹಿತಿ ನೀಡಿದ ನಿರ್ದೇಶಕ ಸುಧೀರ್ ಅತ್ತಾವರ್, ಕಲಾ‌ ನಿರ್ದೇಶನವನ್ನು ತಾವೇ ಮಾಡಿರುವುದಾಗಿ ಹೇಳಿದರು.

ನಮ್ಮ ಕುಟುಂಬದವರಿಗೆ "ಕೊರಗಜ್ಜ" ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ಮಾಪಕ ತ್ರಿವಿಕ್ರಮ ಸಪಲ್ಯ ತಿಳಿಸಿದರು.

ಇದನ್ನೂ ಓದಿ:ಮತ್ತೆ ಬಣ್ಣ ಹಚ್ಚಿದ್ದಾರೆ ಡೈಲಾಗ್ ಕಿಂಗ್ ಸಾಯಿಕುಮಾರ್‌: 'ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ' ಅಂತೆ!

ABOUT THE AUTHOR

...view details