ತಮ್ಮ 27ನೇ ವಿವಾಹ ವಾರ್ಷಿಕೋತ್ಸವ ಹಿನ್ನೆಲೆ ಹಿಂದಿ ಚಿತ್ರರಂಗದ ನಿರ್ಮಾಪಕ ಬೋನಿ ಕಪೂರ್ ಅವರು ತಮ್ಮ ಪತ್ನಿ ಮತ್ತು ದಿವಂಗತ ನಟಿ ಶ್ರೀದೇವಿ ಜೊತೆಗಿನ ಸುಂದರ ಚಿತ್ರ ಹಂಚಿಕೊಂಡಿದ್ದಾರೆ.
ನಿರ್ಮಾಪಕ ಬೋನಿ ಕಪೂರ್ ಇಂದು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಳೇ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಫೋಟೋಗೆ "1996ರ ಜೂನ್ 2ರಂದು ನಾವು ಶಿರಡಿಯಲ್ಲಿ ಮದುವೆ ಆದೆವು, ಇಂದು ನಾವು 27 ವರ್ಷಗಳನ್ನು ಪೂರ್ಣಗೊಳಿಸಿದ್ದೇವೆ" ಎಂಬ ಶೀರ್ಷಿಕೆ ನೀಡಿದ್ದಾರೆ. ನಿರ್ಮಾಪಕರು ಶೇರ್ ಮಾಡಿರುವ ಚಿತ್ರದಲ್ಲಿ, ದಂಪತಿ ದೋಣಿಯಲ್ಲಿ ಕುಳಿತು ಕ್ಯಾಮರಾಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು. ಈ ಫೋಟೋ ಶೇರ್ ಆಗುತ್ತಿದ್ದಂತೆ, ಅಭಿಮಾನಿಗಳು ರೆಡ್ ಹಾರ್ಟ್ ಮತ್ತು ಫೈಯರ್ ಎಮೋಜಿಗಳೊಂದಿಗೆ ಕಾಮೆಂಟ್ ವಿಭಾಗದಲ್ಲಿ ಬ್ಯುಸಿಯಾದರು.
ಬೋನಿ ಕಪೂರ್ ಅವರು ದೇವಾಲಯದ ಆವರಣದಲ್ಲಿ ಕ್ಲಿಕ್ಕಿಸಿರುವ ಚಿತ್ರವನ್ನು ಇನ್ಸ್ಟಾ ಸ್ಟೋರಿನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿಯೂ "ನಾವು ಮದುವೆಯಾಗಿ 27 ವರ್ಷಗಳನ್ನು ಪೂರ್ಣಗೊಳಿಸಿದ್ದೇವೆ" ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಈ ಫೋಟೋದಲ್ಲಿ ದಿ. ನಟಿ ಶ್ರೀದೇವಿ ಗುಲಾಬಿ ಬಣ್ಣದ ಸೀರೆ ಮತ್ತು ಬೋನಿ ಬಿಳಿ ಧೋತಿ ಮತ್ತು ಶಾಲು ಧರಿಸುವುದರೊಂದಿಗೆ ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಾರೆ.
ಈ ಚಿತ್ರಗಳಿಗೆ ಅಭಿಮಾನಿಗಳು, ನೆಟ್ಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. "ಅರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರೆ" ಎಂದು ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ. ಮತ್ತೋರ್ವ ಅಭಿಮಾನಿ ಕೂಡ, "ಅವರು ಸದಾ ನಿಮ್ಮ ಜೊತೆಯೇ ಇರುತ್ತಾರೆ ಸರ್" ಎಂದು ಬರೆದಿದ್ದಾರೆ. ಇನ್ನೋರ್ವ ಸಾಮಾಜಿಕ ಜಾಲತಾಣ ಬಳಕೆದಾರ ಕಾಮೆಂಟ್ ಮಾಡಿ, "ನಿಜವಾಗಿಯೂ ಅವರು ದೇವರ ಕೊಡುಗೆಯಾಗಿದ್ದರು" ಎಂದಿದ್ದಾರೆ. ಇನ್ನೂ ಈ ದಂಪತಿಯ ಪುತ್ರಿಯರಾದ ಬಾಲಿವುಡ್ ನಟಿ ಜಾನ್ವಿ ಕಪೂರ್ ಮತ್ತು ಖುಷಿ ಕಪೂರ್ ತಮ್ಮ ಪೋಷಕರ ವಿವಾಹ ವಾರ್ಷಿಕೋತ್ಸವಕ್ಕೆ ಇನ್ಸ್ಟಾಗ್ರಾಮ್ನಲ್ಲಿ ಶುಭ ಕೋರಿದ್ದಾರೆ.