ದಾರಿ ಯಾವುದಯ್ಯ ವೈಕುಂಠಕ್ಕೆ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗಮನ ಸೆಳೆದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಬ್ರಹ್ಮಕಮಲ ಚಿತ್ರ ಮಾಡಿರೋದು ಗೊತ್ತಿರುವ ವಿಚಾರ. ಚಿತ್ರದ ಟೈಟಲ್ನಿಂದಲೇ ಸದ್ದು ಮಾಡುತ್ತಿರುವ ಬ್ರಹ್ಮಕಮಲ ಚಿತ್ರ ಬಿಡುಗಡೆಗೂ ಮುಂಚೆ ಸಾಕಷ್ಟು ಫಿಲ್ಮ್ ಫೆಸ್ಟಿವಲ್ಗಳಲ್ಲಿ ಪ್ರದರ್ಶನಗೊಳ್ಳುವ ಮುಖಾಂತರ ಸಿನಿಪ್ರಿಯರ ಮೆಚ್ಚುಗೆ ಗಳಿಸುತ್ತಿದೆ. ಇದೀಗ ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ ಬ್ರಹ್ಮಕಮಲ ಚಿತ್ರ ಆಯ್ಕೆಯಾಗಿದೆ.
ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಇದೂ ಒಂದು. ಇಂತಹ ಫೆಸ್ಟಿವಲ್ನಲ್ಲಿ ಬ್ರಹ್ಮಕಮಲ ಚಿತ್ರ ಸ್ಕ್ರೀನಿಂಗ್ ಆಗುತ್ತಿದೆ. ಈಗಾಗಲೇ ಫ್ರಾನ್ಸ್ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ.