ಮುಂಬೈ: ಬ್ರಹ್ಮಾಸ್ತ್ರ ಸಿನಿಮಾ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ವಾರಾಂತ್ಯಕ್ಕೆ ವಿಶ್ವದಾದ್ಯಂತ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ 225 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ತಯಾರಕರು ಸೋಮವಾರ ತಿಳಿಸಿದ್ದಾರೆ. ನಿರ್ದೇಶಕ ಅಯಾನ್ ಮುಖರ್ಜಿ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿನಲ್ಲಿ ಸಂಗ್ರಹದ ಅಪ್ಡೇಟ್ ನೀಡಿದ್ದಾರೆ. ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯಕ್ಕೆ ಪ್ರೀತಿ ನೀಡಿದ ಪ್ರೇಕ್ಷಕರಿಗೆ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ.
ಅಮಿತಾಭ್ ಬಚ್ಚನ್ ಸಹ ನಟಿಸಿರುವ "ಬ್ರಹ್ಮಾಸ್ತ್ರ ಭಾಗ 1: ಶಿವ" ಮೊದಲ ದಿನದಲ್ಲಿ 75 ಕೋಟಿ ಮತ್ತು ಮರುದಿನ 85 ಕೋಟಿಯನ್ನು ಕೊಳ್ಳೆಹೊಡೆದಿದೆ. 400 ಕೋಟಿಗೂ ಅಧಿಕ ಬಜೆಟ್ನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ವರದಿಯಾಗಿದೆ. ಚಿತ್ರದ ನಾಯಕಿ ಆಲಿಯಾ ಭಟ್ ಕೂಡ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಿನಿಮಾ ನೋಡಿದ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.