ರಣ್ಬೀರ್ ಕಪೂರ್, ಆಲಿಯಾ ಭಟ್ ಮುಖ್ಯಭೂಮಿಕೆಯಲ್ಲಿರುವ ಬ್ರಹ್ಮಾಸ್ತ್ರ ಸಿನಿಮಾ ಶುಕ್ರವಾರದಂದು ವಿಶ್ವಾದ್ಯಂತ 8,913 ಸ್ಕ್ರೀನ್ಗಳಲ್ಲಿ ಬಿಡುಗಡೆ ಆಗಿ ಮೊದಲ ದಿನವೇ ಜಗತ್ತಿನೆಲ್ಲೆಡೆ 75 ಕೋಟಿ ರೂ. ಸಂಗ್ರಹಿಸಿತ್ತು. ಕಳೆದೆರಡು ದಿನಗಳಲ್ಲಿ 160 ಕೋಟಿ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಚಿತ್ರ ತಯಾರಕರು ಇಂದು ತಿಳಿಸಿದ್ದಾರೆ.
ಅಯಾನ್ ಮುಖರ್ಜಿ ನಿರ್ದೇಶನ 'ಬ್ರಹ್ಮಾಸ್ತ್ರ ಭಾಗ 1 ಶಿವ' ಚಿತ್ರದಲ್ಲಿ ರಣ್ಬೀರ್, ಆಲಿಯಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಅಮಿತಾಬ್ ಬಚ್ಚನ್, ನಾಗಾರ್ಜುನ್ ಮತ್ತು ಮೌನಿ ರಾಯ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರ ನಿರ್ಮಾಣಕ್ಕೆ ಒಂಭತ್ತು ವರ್ಷಗಳ ಸಮಯ ಹಿಡಿದಿದೆ. 400 ಕೋಟಿ ರೂಪಾಯಿ ಬಂಡವಾಳದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಮೊದಲ ದಿನ 25 ರೂ. ಗಳಿಸಬಹುದೆಂದು ತಜ್ಞರು ಅಭಿಪ್ರಾಯಪಟ್ಟಿದ್ದರು.
ಆದರೆ ನಿರೀಕ್ಷೆಗೂ ಮೀರಿ ಮೊದಲ ದಿನ 75 ಕೋಟಿ, ಎರಡನೇ ದಿನ 85 ಕೋಟಿ ಕಲೆಕ್ಷನ್ ಮಾಡಿದೆ. ಈ ಬಗ್ಗೆ ನಿರ್ಮಾಪಕ ಕರಣ್ ಜೋಹರ್ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.