ನಟ ಶಿವರಾಜ್ ಕುಮಾರ್ ಅಭಿನಯದ, ನಟ ಉಪೇಂದ್ರ ನಿರ್ದೇಶನದ ಮಾಸ್ಟರ್ ಪೀಸ್ ಸಿನಿಮಾ ಓಂ. ಈ ಸಿನಿಮಾದಿಂದ ಸಾಕಷ್ಟು ಕಲಾವಿದರು ಬೆಳಕಿಗೆ ಬಂದರು. ಅದರಲ್ಲಿ ಡಾನ್ ರೈ ಪಾತ್ರ ಮಾಡಿ ರಾತ್ರೋರಾತ್ರಿ ಖ್ಯಾತಿ ಪಡೆದ ನಟ ಹರೀಶ್ ರೈ. ಆ ಸಿನಿಮಾ ಮೂಲಕ ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ಖಳ ನಟರಾಗಿ ಸಿಲ್ವರ್ ಸ್ಕ್ರೀನ್ ಮೇಲೆ ಅಬ್ಬರಿಸಿದ್ದಾರೆ. ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಪ್ರೀತಿಯ ಚಾಚ ಹರೀಶ್ ರೈಗೆ ಕ್ಯಾನ್ಸರ್ ತಗುಲಿದ್ದು, ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಆರೋಗ್ಯ ಸರಿಪಡಿಸಿಕೊಳ್ಳಲು ಹಣಕಾಸಿನ ಅವಶ್ಯಕತೆ ಇದೆ. ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿರೋ ಖಳನಾಯಕ ಹರೀಶ್ ರೈ, ತಾವು ಅನಾರೋಗ್ಯದಿಂದ ಬಳಲುತ್ತಿದ್ದು, ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.