ಆರೋಗ್ಯದಲ್ಲಿನ ಏರುಪೇರಿನಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ಅವರು ಇಂದು ನಿಧನರಾಗಿದ್ದಾರೆ. ಮೂಲತಃ ಆಂಧ್ರ ಪ್ರದೇಶದ ವಿಜಯವಾಡದ ನಿವಾಸಿಯಾಗಿರುವ ಚೌದ್ರಿ ರಾಯಚೂರಿನಲ್ಲಿ ಮೊದಲ ಬಾರಿ ಕೇಬಲ್ ಆರಂಭಿಸಿದ್ದರು.
ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ - ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ
ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ಸಹ ನಟನಾಗಿ ಅಭಿನಯ ಮಾಡಿದ್ದ ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ಅವರಿಂದು ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ
ಬಳಿಕ ಚಲನಚಿತ್ರಗಳಲ್ಲಿ ಸಹ ನಟರಾಗಿ ಅಭಿನಯಿಸಿದ್ದು, ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರ ಜತೆಯಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ಸಹ ನಟನಾಗಿ ಅಭಿನಯ ಮಾಡಿದ್ದಾರೆ.