ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ನಿರ್ಮಾಪಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್ ಹಾಗೂ ಅವರ ಪತ್ನಿ ರೇಖಾರಾಣಿ ವಿರುದ್ಧ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.
ಮಾರ್ಚ್ 25ರಂದು ಸಂಜೆ 6.50ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದ್ದ ಒರಾಯನ್ ಮಾಲ್‌ಗೆ ತೆರಳಿದ್ದ ತನಗೆ ಅಶೋಕ್ ಕಶ್ಯಪ್ ಹಾಗೂ ಅವರ ಪತ್ನಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಮತ್ತು ಹೊರಗೆ ತಳ್ಳಿದ್ದಾರೆ ಎಂದು ನಿರ್ಮಾಪಕ ಕುಮಾರ್.ಎಸ್ ಆರೋಪಿಸಿ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ.