ಬೆಂಗಳೂರು:ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ಹೊಸ ಹೊಸ ನಟಿಯರ ಆಗಮನವಾಗುತ್ತಿದೆ. ಆದರೆ, ಗ್ಲಾಮರ್ ಜೊತೆಗೆ ಪ್ರತಿಭೆ, ಅದೃಷ್ಟ ಇದ್ದವರು ಮಾತ್ರ ಇಲ್ಲಿ ಗಟ್ಟಿಯಾಗಿ ನೆಲೆಯೂರುತ್ತಾರೆ. ಈ ಪೈಕಿ ಪ್ರತಿಭಾನ್ವಿತ ನಾಯಕಿ ಚೈತ್ರಾ ಆಚಾರ್ ಕೂಡ ಒಬ್ಬರು. ಮಹಿರಾ, ಗಿಲ್ಕಿ, ತಲೆದಂಡ ಹೀಗೆ ಪ್ರತಿ ಸಿನಿಮಾಗಳಲ್ಲೂ ವಿಶೇಷ ಪಾತ್ರಗಳ ಮೂಲಕ ಗಮನ ಸೆಳೆದಿರುವ ಚೈತ್ರಾ ಈಗ ಅಕಟಕಟ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಪಾಸಿಟಿವ್ ಗರ್ಲ್: ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡುತ್ತಿರುವ ಅಕಟಕಟ ಸಿನಿಮಾದಲ್ಲಿ ಚೈತ್ರಾ ಆಚಾರ್ ಜಾನಕಿ ಎಂಬ ಪಾತ್ರ ಮಾಡಲಿದ್ದಾರೆ. ಸದಾ ಖುಷಿ ಖುಷಿಯಿಂದ ಜೀವನವನ್ನು ಜೀವಿಸುವ, ನೆಗೆಟಿವ್ ಬಿಟ್ಟು ಪಾಸಿಟಿವ್ ಬಗ್ಗೆ ಯೋಚಿಸುವ, ಮಧ್ಯಮ ವರ್ಗದ ಹುಡುಗಿಯಾಗಿ ಚೈತ್ರಾ ಬಣ್ಣ ಹಚ್ಚಲಿದ್ದಾರೆ. ಇಂಥ ನಾಯಕಿಗೆ ನಾಯಕನೊಬ್ಬ ಬದುಕಿಗೆ ಎಂಟ್ರಿ ಕೊಟ್ಟಾಗ ಏನಾಗುತ್ತದೆ ಎನ್ನುವುದು ಚೈತ್ರಾ ಆಚಾರ್ ಪಾತ್ರ ಎಂದು ಚಿತ್ರತಂಡ ತಿಳಿಸಿದೆ.