ಹೃದಯಾಘಾತಕ್ಕೊಳಗಾಗಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಉತ್ತರ ಪ್ರದೇಶದ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಅವರ ಆಪ್ತ ಕಾರ್ಯದರ್ಶಿ ಗರ್ವಿತ್ ನರಂಗ್ ತಿಳಿಸಿದ್ದಾರೆ.
ಆಗಸ್ಟ್ 10ರಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಘಾತಕ್ಕೊಳಗಾಗಿ ಅವರು ಕುಸಿದು ಬಿದ್ದಿದ್ದರು. ಅಂದಿನಿಂದ ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಅವರ ಬ್ರೇನ್ ಸಂಪೂರ್ಣವಾಗಿ ಡೆಡ್ ಆಗಿದೆ ಎಂದು ಹೇಳಲಾಗಿತ್ತು. ಬಳಿಕ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಲಾಯಿತು.