ನವದೆಹಲಿ:ಉತ್ತರ ಪ್ರದೇಶದಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತ ಉಂಟಾಗಿದೆ. ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡ್ತಿದ್ದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸದ್ಯ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಸ್ಟ್ಯಾಂಡ್-ಅಪ್ ಕಮೇಡಿಯನ್(stand-up comedian) ಆಗಿರುವ ರಾಜು ಶ್ರೀವಾಸ್ತವ್ ನಿನ್ನೆ ರಾತ್ರಿ ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ಏಮ್ಸ್ಗೆ ಕರೆತರಲಾಗಿತ್ತು. ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಈ ಕುರಿತಂತೆ ರಾಜು ಶ್ರೀವಾಸ್ತವ್ ಸಹೋದರ ಆಶಿಶ್ ಶ್ರೀವಾಸ್ತವ್ ಮಾಹಿತಿ ನೀಡಿದರು.