ಮಂಗಳೂರು(ದಕ್ಷಿಣ ಕನ್ನಡ): ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕೀಳು ಮಟ್ಟದ ಕಮೆಂಟ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿಗ್ ಬಾಸ್ನಲ್ಲಿ ರೂಪೇಶ್ ಶೆಟ್ಟಿ ಅವರು ನೀಡಿದ್ದರೆನ್ನಲಾದ ಹೇಳಿಕೆಯೊಂದರ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವರ ಬಗ್ಗೆ ಬೆದರಿಕೆ ರೂಪದಲ್ಲಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೂಪೇಶ್ ಶೆಟ್ಟಿ ಕುಟುಂಬಸ್ಥರು ಮಂಗಳೂರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.