ಕನ್ನಡ ಚಿತ್ರರಂಗದಲ್ಲಿ ಎಲ್ಲಾ ಸ್ಟಾರ್‌ಗಳು ಹೊಸತನದ ಕಥೆಗಳತ್ತ ತಮ್ಮ ಚಿತ್ತ ಹರಿಸುತ್ತಿದ್ದಾರೆ. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಸಹ ಇದೇ ಹಾದಿಯಲ್ಲಿದ್ದು, ತಮ್ಮ ಎಂದಿನ ಸ್ಟೈಲ್‌ನ ಸಿನಿಮಾ ಬಿಟ್ಟು ಹೊಸ ನಿರ್ದೇಶಕರ ಜೊತೆ ಕೆಲಸ ಮಾಡುವ ಉತ್ಸಾಹ ತೋರಿಸುತ್ತಿದ್ದಾರೆ. ಇದೀಗ ಆಕ್ಸಿಡೆಂಟ್, ಲಾಸ್ಟ್ ಬಸ್, ಅಮೃತ್ ಅಪಾರ್ಟ್ಮೆಂಟ್ಸ್ ಅಂತಹ ಅಪಾರ ಮೆಚ್ಚುಗೆ ಪಡೆದ ಚಿತ್ರಗಳನ್ನು ನಿರ್ಮಿಸಿರುವ ಸಂಸ್ಥೆಯ ಹಾಗು ಗುರುರಾಜ ಕುಲಕರ್ಣಿ ನಾಡಗೌಡ ಅವರ ನಿರ್ದೇಶನದ ಈ ಚಿತ್ರವನ್ನು ನಿರ್ಮಿಸಲು ಸಜ್ಜಾಗಿದ್ದಾರೆ.
ನಿರ್ದೇಶಕರ ಕಥೆ ಕೇಳಿ ಮೆಚ್ಚಿಕೊಂಡಿರುವ ರಣಧೀರ.. ತಮ್ಮ ಚೊಚ್ಚಲ ನಿರ್ದೇಶನದ, ಕೌಟುಂಬಿಕ-ಥ್ರಿಲ್ಲರ್ ಶೈಲಿಯ ಅಮೃತ್ ಅಪಾರ್ಟ್ಮೆಂಟ್ಸ್ ಚಿತ್ರಕ್ಕೆ ಸ್ವತಃ ತಾವೇ ಕಥೆ-ಚಿತ್ರಕಥೆಯನ್ನು ಬರೆದು ಪ್ರಶಂಸೆ ಗಳಿಸಿದ ಗುರುರಾಜ ಅವರು ಕ್ರೇಜಿ ಸ್ಟಾರ್ ರವಿಚಂದ್ರನ್ ದೃಶ್ಯ 2 ಸಿನಿಮಾ ಬಳಿಕ ಮತ್ತೊಂದು ಕೌಟುಂಬಿಕ ಚಿತ್ರ ಮಾಡಲು ಉತ್ಸುಕರಾಗಿದ್ದಾರೆ. ಅವರು ನೀಡಿದ ಕಥಾಹಂದರವನ್ನು ರವಿಚಂದ್ರನ್ ಅವರು ಮೆಚ್ಚಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿಯೇ ಈ ಚಿತ್ರದ ತಯಾರಿ ನಡೆದಿದೆ.
ತಮಗಿರುವ ಕೌಟುಂಬಿಕ ಪ್ರೇಕ್ಷಕ ವರ್ಗದ ಜೊತೆಗೆ, ಜಾಗತಿಕ ಮಟ್ಟದಲ್ಲಿನ ಹಲವಾರು ಭಾಷೆಗಳ, ವಿವಿಧ ಬಗೆಯ ಕಥೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸುತ್ತಿರುವ ಇಂದಿನ ಯುವ ಪೀಳಿಗೆಯೊಂದಿಗೂ, ಈ ಚಿತ್ರದ ಮೂಲಕ ತಾವು ಹತ್ತಿರವಾಗುವ ಅವಕಾಶವಿದೆ ಎಂಬುದು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಅಭಿಪ್ರಾಯ. ರವಿಚಂದ್ರನ್ ಅವರು ಈ ಚಿತ್ರದ ಪ್ರಮುಖ ಪಾತ್ರವನ್ನು ವಿಶಿಷ್ಟವಾಗಿ ಹಾಗೂ ಒಂದು ಹೊಸ ಆಯಾಮದಲ್ಲಿ ನಟಿಸುವ ಸದಾವಕಾಶವನ್ನು ತಾವು ಗುರುತಿಸುರಿವುದಾಗಿ ಭರವಸೆ ನೀಡಿದ್ದಾರೆ.