2022ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟರ್ ಜೋಸ್ ಬಟ್ಲರ್ ಅಬ್ಬರಿಸಿ ಬೊಬ್ಬೆರಿದ ವಿಚಾರ ಎಲ್ಲರಿಗೂ ಗೊತ್ತಿದೆ. ಪ್ರಸಕ್ತ ಸಾಲಿನ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ಗಳಿಕೆ ಮಾಡಿ, ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ವಿಶೇಷ ಗಿಫ್ಟ್ ನೀಡಿ, ಕನ್ನಡಿಗರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ರಿಕೆಟ್ ಮೇಲೆ ಹೆಚ್ಚಿನ ಪ್ರೀತಿ ಹೊಂದಿರುವ ಸುದೀಪ್ ಈಗಾಗಲೇ ಸಿಸಿಎಲ್, ಕೆಪಿಎಲ್ನಲ್ಲಿ ನಾಯಕತ್ವ ಜವಾಬ್ದಾರಿ ನಿರ್ವಹಿಸಿದ್ದಾರೆ. ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟರ್ ಬಟ್ಲರ್ ಬ್ಯಾಟ್ವೊಂದನ್ನ ಉಡುಗೊರೆಯಾಗಿ ನೀಡಿದ್ದಾರೆ. 2022ರ ಐಪಿಎಲ್ನಲ್ಲಿ ತಾವು ಬಳಕೆ ಮಾಡಿರುವ ಬ್ಯಾಟ್ ಅನ್ನ ಸುದೀಪ್ ಅವರಿಗೆ ಉಡುಗೊರೆಯಾಗಿ ನೀಡಿದ್ದು, ಅದರ ಮೇಲೆ ಸಹಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ನಟ ಸುದೀಪ್ ವಿಡಿಯೋ ಪೋಸ್ಟ್ ಮಾಡಿದ್ದಾರೆ.