ಕರ್ನಾಟಕ ವಿಧಾನಸಭಾ ಚುನಾವಣೆ 2023 ಹಿನ್ನೆಲೆ ರಾಜ್ಯಾದ್ಯಂತ ಮತದಾನ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಬೆಳಗ್ಗೆಯ ತಮ್ಮ ಮತ ಚಲಾಯಿಸಿ ಮಾದರಿಯಾಗಿದ್ದಾರೆ. ಕನ್ನಡ ಚಿತ್ರರಂಗದ ನಟ ರಾಕ್ಷಸ ಖ್ಯಾತಿಯ ಡಾಲಿ ಧನಂಜಯ್ ಮತ್ತು ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಇಂದು ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ.
ಕನ್ನಡ ನಟ ಡಾಲಿ ಧನಂಜನಯ್ ಅವರು ತಮ್ಮ ಕುಟುಂಬಸ್ಥರೊಂದಿಗೆ ಬಂದು ಅರಸೀಕೆರೆಯ ಕಾಳೇನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದರು. ಬಳಿಕ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ. ಆ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡಿದ್ದಾರೆ. ಮತದಾನದ ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಡಾಲಿ ಧನಂಜನಯ್ ಪೋಸ್ಟ್: ''ನಾವೆಲ್ಲ Vote ಮಾಡುದ್ವಿ, ನೀವೂ Vote ಮಾಡಿ. Vote ಮಾಡುವವರೆ Dare Devil. ನಾನ್ ಬಿಡಿ ಡೇರ್ ಡೆವಿಲ್, ನೀವು..?'' ಎಂದು ಬರೆದುಕೊಂಡು ಕೆಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪ್ರತಿಯೊಬ್ಬ ಮತದಾರರು ತಮ್ಮ ಮತ ಚಲಾಯಿಸಲು ಸ್ಫೂರ್ತಿ ಆಗಿದ್ದಾರೆ.