ಜನಪ್ರಿಯ ಹಾಸ್ಯ ನಟ ಶಿವರಾಜ್ ಕೆ.ಆರ್.ಪೇಟೆ ನಾನು ಮತ್ತು ಗುಂಡ ಸಿನಿಮಾದ ಬಳಿಕ ಮತ್ತೆ ನಾಯಕರಾಗಿ ನಟಿಸುತ್ತಿರುವ 'ಧಮಾಕ' ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಿಲೀಸ್ ಆಗಿದ್ದ 'ತುಕಾಲಿ ಸಿಂಗಿಂಗ್' ಗೆ ಬೇಜಾನ್ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಸಿದ್ದು ಮೂಲಿಮನಿ ಹಾಗೂ ಪ್ರಿಯಾ ಆಚಾರ್ ಭರ್ಜರಿ ಸ್ಟೆಪ್ಸ್ ಹಾಕಿರುವ 'ನಾನು ಹೋಗೋಕು ಮೊದ್ಲು' ಎಂಬ ಹಾಡು ಬಿಡುಗಡೆಯಾಗಿದೆ.
ನಿರ್ದೇಶಕ ಲಕ್ಷ್ಮೀ ರಮೇಶ್ ಸಾಹಿತ್ಯದ ಮೆಲೋಡಿ ಹಾಡಿಗೆ ಗಾಯಕ ವಿಜಯ್ ಪ್ರಕಾಶ್ ಹಾಗೂ ಮಾನಸ ಹೊಳ್ಳ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಮಾಡಿದ್ದಾರೆ. ಅದ್ಭುತ ಸಾಹಿತ್ಯ, ಸಂಗೀತ, ಕೊರಿಯೋಗ್ರಾಫಿ ಇರುವ ಹಾಡಿಗೆ ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಿಂದೆ ಸಿಂಪಲ್ ಸುನಿ ಬಳಗದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾನ್ವಿತ ನಿರ್ದೇಶಕ ಲಕ್ಷ್ಮೀ ರಮೇಶ್ ಧಮಾಕಾ ಸಿಸಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.