ಬಾಲಿವುಡ್‌ನ ಖ್ಯಾತ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಬಹಳ ಸಮಯದ ನಂತರ ಮತ್ತೊಮ್ಮೆ ರೊಮ್ಯಾಂಟಿಕ್ ಸಿನಿಮಾದೊಂದಿಗೆ ಬರಲು ಸಜ್ಜಾಗಿದ್ದಾರೆ. ಕರಣ್ ಜೋಹರ್ ನಿರ್ಮಾಣದ ಜೊತೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದಾರೆ. 'ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ' (Rocky Aur Rani Ki Prem Kahani) ಚಿತ್ರ ಅತಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.
ಈ ಬಾರಿ ಕರಣ್ ತಮ್ಮ ರೊಮ್ಯಾಂಟಿಕ್ ಸಿನಿಮಾದಲ್ಲಿ ಗಲ್ಲಿ ಬಾಯ್ ರಣ್ವೀರ್ ಸಿಂಗ್ ಮತ್ತು ಆಲಿಯಾ ಭಟ್ ಹಿಟ್ ಜೋಡಿಯನ್ನು ಕರೆತಂದಿದ್ದಾರೆ. ಚಿತ್ರದ ಪೋಸ್ಟರ್ ಹಾಗೂ ಟೀಸರ್ ಕೂಡ ಈಗಾಗಲೇ ಬಿಡುಗಡೆ ಆಗಿದೆ. ಇನ್ನು ಈ ಚಿತ್ರದಲ್ಲಿ ದೊಡ್ಡ ಪಾತ್ರದಲ್ಲಿ ನಟಿಸುತ್ತಿರುವ ಹಿರಿಯ ನಟ ಧರ್ಮೇಂದ್ರ ಅವರು ಈ ಚಿತ್ರಕ್ಕೆ ಸಂಬಂಧಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರದ ನಾಯಕ ನಟಿ ಆಲಿಯಾ ಭಟ್ ಜೊತೆಗಿನ ಮುದ್ದಾದ ಫೋಟೋವನ್ನು ನಟ ಧರ್ಮೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಅಭಿಮಾನಿಗಳು ಈ ಚಿತ್ರದ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧರ್ಮೇಂದ್ರ ಅವರ ಹಿರಿಯ ಮಗ ಸನ್ನಿ ಡಿಯೋಲ್ ಕೂಡ ಈ ಫೋಟೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸುಂದರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಧರ್ಮೇಂದ್ರ, ''ಸ್ನೇಹಿತರೇ, ಪ್ರೀತಿಯ ಆಲಿಯಾ ನನ್ನ ಗತಕಾಲದ ಕೆಲವು ಝಲಕ್‌ಗಳನ್ನು ತೋರಿಸುತ್ತಿದ್ದಾರೆ. ರಾಣಿ ಔರ್ ರಾಕಿ ಕಿ ಪ್ರೇಮ್ ಕಹಾನಿ ಸೆಟ್ನ ಫೋಟೋ'' ಎಂದು ಬರೆದುಕೊಂಡಿದ್ದಾರೆ.