ಲವ್ ಮಾಕ್ ಟೈಲ್ ಸಿನಿಮಾ ಬಳಿಕ ಕನ್ನಡ ಚಿತ್ರರಂಗದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ನಟ ಡಾರ್ಲಿಂಗ್ ಕೃಷ್ಣ. ಸದ್ಯ ಲಕ್ಕಿಮ್ಯಾನ್ ಸಿನಿಮಾ ಸಕ್ಸಸ್ ಖುಷಿಯಲ್ಲಿರೋ ಡಾರ್ಲಿಂಗ್ ಕೃಷ್ಣ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ದಿಲ್ ಪಸಂದ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
ಡಾರ್ಲಿಂಗ್ ಕೃಷ್ಣ ಹಾಗು ನಿಶ್ವಿಕಾ ನಾಯ್ಡು ಟೈಟಲ್ನಿಂದಲೇ ಚಂದನವನದಲ್ಲಿ ಸದ್ದು ಮಾಡುತ್ತಿರೋ ದಿಲ್ ಪಸಂದ್ ಸಿನಿಮಾ ಡಾರ್ಲಿಂಗ್ ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ನಟಿಸಿರುವ ಟ್ರಯಾಂಗಲ್ ಲವ್ ಸ್ಟೋರಿ ಸಿನಿಮಾ. ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರೋ ದಿಲ್ ಪಸಂದ್ ಸಿನಿಮಾ ಈಗಾಗಲೇ ಹಾಡುಗಳು ಹಾಗೂ ಪೋಸ್ಟರ್ ಮೂಲಕ ಒಂದು ಮಟ್ಟಿಗೆ ಟಾಕ್ ಆಗಿದೆ. ಈ ಚಿತ್ರ ನವೆಂಬರ್ 11ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.
ಡಾರ್ಲಿಂಗ್ ಕೃಷ್ಣ ಹಾಗು ನಿಶ್ವಿಕಾ ನಾಯ್ಡು ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನ ಶಿವತೇಜಸ್ ನಿರ್ದೇಶನ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ನಿಶ್ವಿಕಾ ನಾಯ್ಡು ಅಲ್ಲದೇ ಮೇಘ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ಮಾಡಿರೋ ದಿಲ್ ಪಸಂದ್ ಸಿನಿಮಾದ ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿದ್ದಾರೆ.
ಇದನ್ನೂ ಓದಿ:ಟೀಕೆಗಳಿಗೆ ಸೆಡ್ಡು ಹೊಡೆದು ಬಾಕ್ಸ್ ಆಫೀಸ್ ಉಡೀಸ್ ಮಾಡಿದ ಬ್ರಹ್ಮಾಸ್ತ್ರ..ಮೊದಲ ದಿನವೇ 75 ಕೋಟಿ ಕಲೆಕ್ಷನ್