ವಿಭಿನ್ನ ಚಿತ್ರಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ತನ್ನದೇ ಬೇಡಿಕೆ ಹೊಂದಿರುವ ನಿರ್ದೇಶಕ ಜೋಗಿ ಪ್ರೇಮ್. ಏಕ್ ಲವ್ ಯಾ ಸಿನಿಮಾ ಬಳಿಕ ಜೋಗಿ ಪ್ರೇಮ್, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾಗೆ ಆಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ. ಈ ಹಿಂದೆ ಜೋಗಿ ಪ್ರೇಮ್ ಧ್ರುವ ಸರ್ಜಾಗೆ ಆಕ್ಷನ್ ಕಟ್ ಹೇಳುತ್ತಾರೆ ಅಂತಾ ಸುದ್ದಿಯಾಗಿತ್ತು. ಅದರಂತೆ ಜೋಗಿ ಪ್ರೇಮ್ ನಿರ್ದೇಶನದ, ಧ್ರುವಾ ಸರ್ಜಾ ಅಭಿನಯದ ಹೆಸರಿಡದ ಪ್ಯಾನ್ ಇಂಡಿಯಾ ಸಿನಿಮಾಗೆ ಮುಹೂರ್ತ ಫಿಕ್ಸ್ ಆಗಿದೆ. ಸದ್ಯ ಹೆಸರಿಡದ ಧ್ರುವ ಸರ್ಜಾ ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ.
ಇದರಲ್ಲಿ 1970 ಇಸವಿ, ಡೆಲ್ಲಿ ಗೇಟ್ ಮಾದರಿಯ ಗೇಟ್, ಗನ್ ಹಿಡಿದು ನಿಂತಿರೋ ವ್ಯಕ್ತಿ, ಹೀಗೆ ರೆಟ್ರೋ ಸ್ಟೈಲಲ್ಲಿ ಪ್ರೇಮ್ ಪೋಸ್ಟರ್ ಬಿಟ್ಟಿದ್ದಾರೆ. ಜೊತೆಗೆ ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ ಅಂತ ಬರೆದು ಅಡಿ ಬರಹದಲ್ಲಿ ಇದು ನೈಜ ಘಟನೆಯನ್ನಾಧರಿಸಿದ ಕಥೆ ಎಂದು ಹೇಳಿದ್ದಾರೆ.