ಕನ್ನಡ ಚಿತ್ರರಂಗದಲ್ಲಿ ಹೊಸ ತಂಡದಿಂದ 'ಹೊಸ ದಿನಚರಿ' ಎಂಬ ಸಿನಿಮಾ ನಿರ್ಮಾಣವಾಗಿದೆ. ಚಿತ್ರದ ಪೋಸ್ಟರ್, ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಹಿರಿಯ ನಿರ್ದೇಶಕ ಟಿ ಎಸ್ ನಾಗಾಭರಣ ಅವರು ಹೊಸ ದಿನಚರಿಯ ಸಿನಿಮಾದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಕನ್ನಡ ಚಿತ್ರರಂಗದಲ್ಲಿ ಎರಡು ದಶಕಕ್ಕೊಮ್ಮೆ ಒಂದು ಬದಲಾವಣೆ ಆಗುತ್ತಿರುತ್ತದೆ. ಎಂಭತ್ತರಲ್ಲಿ, ಎರಡು ಸಾವಿರನೇ ಇಸವಿಯಲ್ಲಿ, ಈಗ ಎರಡು ಸಾವಿರದ ಇಪ್ಪತ್ತರಲ್ಲಿ. ಟೀಸರ್ ನೋಡಿದರೆ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ನಿರೀಕ್ಷೆಯಿದೆ ಟಿ ಎಸ್ ನಾಗಾಭರಣ ಹೇಳಿದರು.
ಯುವ ನಟರಾದ ದೀಪಕ್ ಸುಬ್ರಹ್ಮಣ್ಯ ಹಾಗೂ ಚೇತನ್ ವಿಕ್ಕಿ, ನಟಿಯರಾದ ಮಂದಾರ ಹಾಗೂ ವರ್ಷ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದರ ಜೊತೆಗೆ ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್, ದೀಪಕ್ ಸುಬ್ರಹ್ಮಣ್ಯ, ಮಂದಾರ, ವರ್ಷ, ಚೇತನ್ ವಿಕ್ಕಿ, ವಿವೇಕ್ ದೇವ್, ಶ್ರೀಪ್ರಿಯ, ಸುಪ್ರೀತಾ ಗೌಡ ಹಾಗೂ ಬೇಬಿ ಮಾನಿನಿ ತಾರಾ ಬಳಗದಲ್ಲಿದ್ದಾರೆ.