'ದೂರದರ್ಶನ' ಈ ಹೆಸರು ಕೇಳಿದ ಕೂಡಲೇ ಸರ್ಕಾರಿ ಟಿವಿ ಚಾನೆಲ್ ನೆನಪಾಗುತ್ತದೆ. 80, 90ರ ದಶಕದವರಿಗೆ ದೂರದರ್ಶನ ಅಂದ್ರೆ ಒಂದು ರೋಮಾಂಚನಕಾರಿ ಅನುಭವ. ಅವರಿಗೆ ಅದರೊಂದಿಗೆ ಒಂದು ಅವಿನಾಭಾವ ನಂಟು ಬೆಳೆದಿರುತ್ತೆ. ಅದ್ರಲ್ಲೂ ಹಳ್ಳಿಯವರಾದರೆ ಆ ನಂಟಿನ ಸೊಗಸೇ ಅದ್ಭುತ.
ದೂರದರ್ಶನ ಪರಿಣಾಮ: ಒಂದು ಚಿಕ್ಕ ಊರೊಳಗೆ ಟಿವಿ ಅಥವಾ ದೂರದರ್ಶನ ಬಂದ ಮೇಲೆ ಹೇಗೆಲ್ಲಾ ಪ್ರಭಾವ ಬೀರುತ್ತದೆ. ಅಂದಿನ ಕಾಲಘಟ್ಟದಲ್ಲಿ ಇದ್ದಂತಹ ಹಲವಾರು ಪ್ರಚಲಿತ ವಿದ್ಯಮಾನಗಳನ್ನು ನೋಡುಗರು ಮೆಲುಕು ಹಾಕುವಂತೆ ಮಾಡುವ ಕಥಾ ಹಂದರ ಇರುವ ಸಿನಿಮಾವೇ ದೂರದರ್ಶನ. ಆಕರ್ಷಕ ಶೀರ್ಷಿಕೆಯಡಿ ತಯಾರಾಗಿರುವ ಈ ಸಿನಿಮಾ 80ರ ದಶಕಕ್ಕೆ ನೋಡುಗರನ್ನು ಕರೆದೊಯ್ಯುಲಿದೆ. ಈಗಲೂ ಆ ದಿನಗಳನ್ನು ಮಿಸ್ ಮಾಡಿಕೊಳ್ಳೋರಿಗೆ ಆ ಅನುಭವವನ್ನು ತೆರೆ ಮೇಲೆ ಕಟ್ಟಿಕೊಡಲು ಸಿದ್ಧವಾಗಿರೋ ಸಿನಿಮಾವೇ ದೂರದರ್ಶನ.
ಹಳ್ಳಿ ಸೊಗಡಿನಲ್ಲಿ ಸಿನಿಮಾ: ಟೈಟಲ್ ಕೇಳಿದಾಕ್ಷಣ ಸಹಜವಾಗಿ ಎಲ್ಲರಿಗೂ ಕನೆಕ್ಟ್ ಆಗುತ್ತದೆ. ಅದೇ ರೀತಿ ಸಿನಿಮಾ ಕೂಡ ಹಳ್ಳಿ ಸೊಗಡಲ್ಲೇ ಮೋಡಿ ಮಾಡೋಕೆ ಸಿದ್ಧವಾಗಿದೆ. ಹಾಡುಗಳ ಮೂಲಕ ಮೋಡಿ ಮಾಡಿರೋ ದೂರದರ್ಶನ ಚಿತ್ರತಂಡ ಈಗ ಪ್ರಾಮಿಸಿಂಗ್ ಆಗಿರೋ ಟೀಸರ್ ಬಿಡುಗಡೆ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ಮಾಸ್ ಸಿನಿಮಾ ಭರಾಟೆಯಲ್ಲಿ ಹಳ್ಳಿ ಸೊಗಡಿರೋ, ಹಳ್ಳಿಯಲ್ಲಿ ನಡೆಯೋ ಕಥಾನಕಗಳಿರೋ ಸಿನಿಮಾಗಳು ಕಡಿಮೆ ಆಗಿದೆ ಅನ್ನೋರಿಗೆ ಗುಡ್ ನ್ಯೂಸ್. ಪಕ್ಕಾ ಹಳ್ಳಿ ಸೊಗಡಿರುವ 80, 90ರ ದಶಕದ ಚಿತ್ರಣವನ್ನೊಳಗೊಂಡ ದೂರದರ್ಶನ ಸಿನಿಮಾ ಮನೋರಂಜನೆ ನೀಡಲು ಸಜ್ಜಾಗಿದೆ. ಹಾಗೆಂದ ಮಾತ್ರಕ್ಕೆ ಕೇವಲ ಕ್ಲಾಸ್ ಆಡಿಯನ್ಸ್ ಸಿನಿಮಾವೇನಲ್ಲ. ಮಾಸ್ ಆಡಿಯನ್ಸ್ಗಳನ್ನು ಸೆಳೆಯೋ ಕಂಟೆಂಟ್ ಚಿತ್ರದಲ್ಲಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಪ್ರಾಮಿಸಿಂಗ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡ ಗಮನ ಸೆಳೆದಿದೆ.