ವಿಶಿಷ್ಟ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ನಟಿ ಐಶ್ವರ್ಯಾ ರಾಜೇಶ್ ನಟನೆಯ ಡ್ರೈವರ್ ಜಮುನಾ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಕನ್ನಡದಲ್ಲಿ ಈ ಟ್ರೇಲರ್ ಅನ್ನು ಬಹುಭಾಷಾ ನಟ ಕಿಶೋರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
'ವತ್ತಿಕುಚ್ಚಿ’ ಸಿನಿಮಾ ಖ್ಯಾತಿಯ ಪಾ. ಕಿನ್ಸ್ಲಿನ್ ನಿರ್ದೇಶನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಐಶ್ವರ್ಯಾ ರಾಜೇಶ್ ಕ್ಯಾಬ್ ಡ್ರೈವರ್ ಆಗಿ ಬಣ್ಣ ಹಚ್ಚಿದ್ದಾರೆ. ಹೆಣ್ಣು ಮಕ್ಕಳು ಡ್ರೈವರ್ ವೃತ್ತಿಗೆ ಇಳಿದಾಗ ಆಕೆ ಎದುರಿಸುವ ಸವಾಲುಗಳನ್ನು ಇಡೀ ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ.
ತಾರಾಬಳಗದಲ್ಲಿ ಆಡುಕಳಂ ನರೇನ್, ಶ್ರೀ ರಂಜನಿ, ಸ್ಟ್ಯಾಂಡ್ ಅಪ್ ಕಾಮಿಡಿಯನ್ ಅಭಿಷೇಕ್, ರಾಜಾ ರಾಣಿ ಸಿನಿಮಾ ಖ್ಯಾತಿಯ ಪಾಂಡಿಯನ್, ಕವಿತಾ ಭಾರತಿ, ಮಣಿಕಂದನ್, ರಾಜೇಶ್ ಸೇರಿದಂತೆ ಹಲವರು ಇದ್ದಾರೆ. ಡ್ರೈವರ್ ಜಮುನಾ ಸಿನಿಮಾ ಮಹಿಳಾ ಕ್ಯಾಬ್ ಡ್ರೈವರ್ ಸುತ್ತ ನಡೆಯುವ ಘಟನೆಯಾಗಿದ್ದು, ಈ ಪಾತ್ರಕ್ಕಾಗಿ ಐಶ್ವರ್ಯಾ ಮಹಿಳಾ ಕ್ಯಾಬ್ ಡ್ರೈವರ್ಗಳನ್ನು ಭೇಟಿ ಮಾಡಿ ಅವರ ಹಾವ -ಭಾವವನ್ನು ಗಮನಿಸಿ ಅದನ್ನು ತಮ್ಮ ಪಾತ್ರದಲ್ಲಿ ಅಳವಡಿಸಿಕೊಂಡಿದ್ದಾರೆ. ಯಾವುದೇ ಡೂಪ್ ಬಳಸದೇ ಐಶ್ವರ್ಯಾ ತಮ್ಮ ಪಾತ್ರ ಮಾಡಿದ್ದಾರೆ.
ಇದನ್ನೂ ಓದಿ:ಹೊಯ್ಸಳ ಶೂಟಿಂಗ್ ಸ್ಥಳಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ
ಗೋಕುಲ್ ಬೆನೊಯ್ ಛಾಯಾಗ್ರಹಣ, ಗಿಬ್ರಾನ್ ಸಂಗೀತ ಜವಾಬ್ದಾರಿ ಹೊತ್ತುಕೊಂಡಿದ್ದು, ಎಸ್.ಪಿ.ಚೌದರಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಕನ್ನಡ, ತಮಿಳು, ತೆಲುಗು, ಹಾಗೂ ಮಲಯಾಳಂ ಭಾಷೆಯಲ್ಲಿ ಈ ಸಿನಿಮಾ ಬಿಡಗಡೆ ಆಗಲಿದೆ.