'ರೈಡರ್' ಚಿತ್ರದ ಬಳಿಕ ಪ್ರತಿಷ್ಠಿತ ಲೈಕಾ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ಲಕ್ಷ್ಮಣ್ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಮೊದಲ ಶೆಡ್ಯೂಲ್ ಇತ್ತೀಚೆಗೆ ಆರಂಭವಾಗಿದೆ. ಐದು ತಿಂಗಳಲ್ಲಿ ಈ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಚಿತ್ರತಂಡ, ಬಿರುಸಿನಿಂದ ಶೂಟಿಂಗ್ ಕೆಲಸ ಕೈಗೊಂಡಿದೆ.
ಲವ್ ಸ್ಟೋರಿ ಜೊತೆಗೆ ಆ್ಯಕ್ಷನ್ ಕಥೆಯನ್ನಾಧಾರಿಸಿದ ಈ ಹೆಸರಿಡದ ಚಿತ್ರದ ಶೂಟಿಂಗ್ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಈ ಸಿನಿಮಾ ಶೂಟಿಂಗ್ ಸ್ಪಾಟ್ಗೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಭೇಟಿ ನೀಡಿ ಚಿತ್ರದ ಬಗ್ಗೆ ಮಾತುಕತೆ ನಡೆಸಿದ್ದರು.
ಇದೀಗ ನಿಖಿಲ್ ಕುಮಾರಸ್ವಾಮಿ ಶೂಟಿಂಗ್ ಅಡ್ಡದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಈ ಚಿತ್ರದಲ್ಲಿ ಕರಿಚಿರತೆ ದುನಿಯಾ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಇಂಟ್ರಸ್ಟಿಂಗ್ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ದುನಿಯಾ ವಿಜಯ್ ಜೊತೆ ತೆರೆ ಹಂಚಿಕೊಳ್ಳುವುಕ್ಕೆ ನಾನು ಎಕ್ಸೈಟ್ ಆಗಿದ್ದೇನೆ' ಎಂದು ಬರೆದುಕೊಂಡಿದ್ದಾರೆ. ಆದರೆ ಅವರು ನೆಗಿಟಿವ್ ಅಥವಾ ಪಾಸಿಟಿವ್ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಅನ್ನೋದು ಮಾತ್ರ ರಿವೀಲ್ ಆಗಿಲ್ಲ.