ಡ್ರಗ್ಸ್ ಪ್ರಕರಣ ಸಂಬಂಧ ಜನಪ್ರಿಯ ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್ 3ರಂದು ಇಡಿ ಅಧಿಕಾರಿಗಳು ರಾಕುಲ್ ಅವರನ್ನು ವಿಚಾರಣೆ ನಡೆಸಿದ್ದರು.
ತುರ್ತಾಗಿ ಹೋಗಬೇಕು ಎಂದು ಈ ಮೊದಲು ತನಿಖೆಯ ಮಧ್ಯದಲ್ಲಿಯೇ ಹೊರಟು ಹೋಗಿದ್ದರು. ಈ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನು ಸಂಪೂರ್ಣವಾಗಿ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ತನಿಖೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ,ರಾಕುಲ್ ಪ್ರೀತ್ ಸಿಂಗ್ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಜುಲೈ 2017ರಲ್ಲಿ, ತೆಲಂಗಾಣ ಅಬಕಾರಿ ಪೊಲೀಸರು ಟಾಲಿವುಡ್‌ನಲ್ಲಿ ಡ್ರಗ್ ಡೀಲಿಂಗ್ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಎಸ್‌ಐಟಿ ರಚಿಸಿ ಹಲವು ಚಿತ್ರರಂಗದ ಗಣ್ಯರನ್ನು ವಿಚಾರಣೆಗೊಳಪಡಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಇಡಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಅಕ್ರಮ ಹಣ ವರ್ಗಾವಣೆ ಅಡಿಯಲ್ಲಿ ಕೈಗೆತ್ತಿಕೊಂಡಿದ್ದರು. ಈ ವರ್ಷ ಆಗಸ್ಟ್ 31ರಿಂದ ಸೆಪ್ಟೆಂಬರ್ 22ರವರೆಗೆ ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲಾಗಿದೆ. ಪುರಿ ಜಗನ್ನಾಥ್, ಚಾರ್ಮಿ, ರಾಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಮುಮೈತ್ ಖಾನ್, ನಂದು, ತನಿಶ್, ನವದೀಪ್, ರವಿ ತೇಜ ಸೇರಿ ಹಲವರು ಇಡಿ ತನಿಖೆಗೆ ಹಾಜರಾಗಿದ್ದರು.
ಇದನ್ನೂ ಓದಿ: ನಟ ಪೃಥ್ವಿರಾಜ್ ಸುಕುಮಾರನ್ ಸೇರಿ ಮಲಯಾಳಂ ಚಿತ್ರರಂಗದ ಪ್ರಮುಖರ ಮೇಲೆ ಐಟಿ ದಾಳಿ