ಬಾಲಿವುಡ್ ಸ್ಟಾರ್ ನಿರ್ಮಾಪಕಿ ಏಕ್ತಾ ಕಪೂರ್ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಮುಂದಾಗಿದ್ದಾರೆ. ಬಾಲಾಜಿ ಟೆಲಿಫಿಲ್ಮ್ಸ್ ಮೂಲಕ ಅನೇಕ ಧಾರಾವಾಹಿ ಮತ್ತು ಸಿನಿಮಾಗಳಿಗೆ ಬಂಡವಾಳ ಹೂಡಿರುವ ನಿರ್ಮಾಪಕಿ, ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾಗೆ ದುಡ್ಡು ಹಾಕಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದ ಮೂಲಕ ಅವರೇ ಮಾಹಿತಿ ನೀಡಿದ್ದಾರೆ.
ಈಗಾಗಲೇ ತಿಳಿದಿರುವಂತೆ ಕನ್ನಡದ ಖ್ಯಾತ ನಿರ್ದೇಶಕ ನಂದಕಿಶೋರ್, ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಹೆಸರು 'ವೃಷಭ'. ಕನ್ನಡದಲ್ಲಿ ಅಧ್ಯಕ್ಷ, ರನ್ನ, ಪೊಗರುನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಕಿಶೋರ್, ಈ ಸಿನಿಮಾ ಮೂಲಕ ಬೇರೆ ಭಾಷೆಯಲ್ಲೂ ತಮ್ಮ ಛಾಪು ಮೂಡಿಸಲು ಸಜ್ಜಾಗಿದ್ದಾರೆ.
ಇದು 2024ರ ಬಹುದೊಡ್ಡ ಚಿತ್ರ ಎಂದು ಹೇಳಲಾಗುತ್ತಿದೆ. ಇದೇ ಸಿನಿಮಾಗೆ ಏಕ್ತಾ ಕಪೂರ್ ಬಂಡವಾಳ ಹೂಡುತ್ತಿದ್ದಾರೆ. ಈ ಬಗ್ಗೆ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ನಿರ್ಮಾಪಕಿ, "ದಿಗ್ಗಜ ನಟ ಮೋಹನ್ಲಾಲ್ ಅವರೊಂದಿಗೆ ಕೆಲಸ ಮಾಡಲು ತುಂಬಾ ಉತ್ಸುಕಳಾಗಿದ್ದೇನೆ. ಬಾಲಾಜಿ ಟೆಲಿಫಿಲ್ಮ್ಸ್ ಕನೆಕ್ಟ್ ಮೀಡಿಯಾ ಮತ್ತು ಎವಿಎಸ್ ಸ್ಟುಡಿಯೋಸ್ 'ವೃಷಭ'ಕ್ಕಾಗಿ ಜೊತೆಯಾಗಲಿದೆ. ಹೆಚ್ಚಿನ ಎಮೋಷನ್ಸ್ ಮತ್ತು ವಿಎಫ್ಎಕ್ಸ್ಗಳೊಂದಿಗೆ ಸಿನಿಮಾ ಆಕ್ಷನ್ ಎಂಟರ್‌ಟೈನರ್ ಆಗಿರಲಿದೆ. 'ವೃಷಭ' 2024ರ ಅತಿದೊಡ್ಡ ಚಲನಚಿತ್ರಗಳಲ್ಲಿ ಒಂದಾಗಿದೆ. ಈ ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡಲಿದ್ದಾರೆ. ಮಲಯಾಳಂ, ತೆಲುಗು, ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ ಏಕಕಕಾಲಕ್ಕೆ ಬಿಡುಗಡೆಯಾಗಲಿದೆ" ಎಂದು ಬರೆದುಕೊಂಡಿದ್ದಾರೆ.