ಸ್ಯಾಂಡಲ್ವುಡ್ She's ಆನ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್ ಪಿ. ನಡಲುಮನೆ ನಿರ್ದೇಶನ ಮಾಡುತ್ತಿರೋ ಎರಡನೇ ಚಿತ್ರ ವೆಂಚರ್ ಮೇರಿ. ಸದ್ಯ ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಇಂಟ್ರಸ್ಟಿಂಗ್ ಟ್ರೇಲರ್ ಹೊತ್ತು ಬಂದ ಚಿತ್ರತಂಡ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದೆ.
ಮೇರಿ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆ ಒಳಗೊಂಡಿದೆ. ವಿಕಾಶ್ ಉತ್ತಯ್ಯ, ಅನೂಷ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗವೂ ಪಾಲ್ಗೊಂಡಿದೆ.
ನಿರ್ದೇಶಕ ಮನೋಜ್ ಪಿ.ನಡುಲುಮನೆ ಮಾತನಾಡಿ,"ಮೇರಿ ಒಂದು ತಂಡದ ಪರಿಶ್ರಮ. ಥ್ರಿಲ್ಲರ್ ಸಬ್ಜೆಕ್ ಸಿನಿಮಾ. ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲೆಯ ಕಾಡಿನ ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ಅಪಾಯಿಂಟ್ ಆದ ಎಸ್ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರತಂಡಕ್ಕೆ ಸಪೋರ್ಟ್ ಮಾಡಿ" ಎಂದು ತಿಳಿಸಿದರು.