ಸ್ಯಾಂಡಲ್ವುಡ್ನಲ್ಲಿ ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಸಾಮಾಜಿಕ ಕಳಕಳಿ ಇರುವ ಚಿತ್ರಗಳು ಕಡಿಮೆ ಆಗುತ್ತಿವೆ. ಇದೀಗ ಗುಬ್ಬಿಮರಿ ಎಂದು ಟೈಟಲ್ ಇಟ್ಟುಕೊಂಡು ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಹೋರಾಟ ಮಾಡುವ ಕಥೆ ಆಧಾರಿತ ಚಿತ್ರವೊಂದು ಬರುತ್ತಿದೆ. ಚಿತ್ರದಲ್ಲಿ ಮಾಸ್ಟರ್ ಚಿನ್ಮಯ್, ಮಾಸ್ಟರ್ ಸಂಜಯ್ ಹಾಗು ಸಿಂಧು ಮುಖ್ಯ ಭೂಮಿಕೆಯಲ್ಲಿದ್ದಾರೆ. ಮಧು ಡಕಣಾಚಾರ್ ನಿರ್ದೇಶನ ಹೊಣೆ ಹೊತ್ತಿದ್ದಾರೆೆ.
ನಿರ್ದೇಶಕ ಮಧು ಜಕಣಾಚಾರ್ ಮಾತನಾಡಿ, ಕೆಲವರಿಗೆ ಹೆಣ್ಣು ತಾಯಿಯಾಗಿ ಬೇಕು, ಹೆಂಡತಿಯಾಗಿ ಬೇಕು. ಆದರೆ ಮಗಳಾಗಿ ಮಾತ್ರ ಬೇಡ. ಕಾಲ ಎಷ್ಟು ಮುಂದುವರೆದಿದ್ದರೂ ಇನ್ನೂ ಕೆಲವು ವಿಕೃತ ಮನಸ್ಸಿನವರು ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಅಂತಹವರಿಗೆ ಈ ಸಿನಿಮಾ ಮೂಲಕ ಇದು ತಪ್ಪು ಎಂದು ಅರಿವು ಮೂಡಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ ಎಂದರು.