ಕರ್ನಾಟಕ

karnataka

ETV Bharat / entertainment

ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು: ಕೋವಿಡ್​ ನೆಗೆಟಿವ್​ - Mani Ratnam hospitalised

ಇಂದು ಬೆಳಗ್ಗೆ ದೇಹದ ಉಷ್ಣಾಂಶ ಹೆಚ್ಚಾದಂತೆ ಕಂಡು ಬಂದ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ಖ್ಯಾತ ನಿರ್ದೇಶಕ ಮಣಿರತ್ನಂ ದಾಖಲಾಗಿದ್ದಾರೆ.

Filmmaker Mani Ratnam hospitalised
ಖ್ಯಾತ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲು: ಕೋವಿಡ್​ ನೆಗೆಟಿವ್​

By

Published : Jul 19, 2022, 3:20 PM IST

ಚೆನ್ನೈ (ತಮಿಳುನಾಡು): ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಮಣಿರತ್ನಂ ಅವರಿಗೆ ದೇಹದ ಉಷ್ಣಾಂಶ ಹೆಚ್ಚಾದಂತೆ ಕಂಡು ಬಂತು. ಹೀಗಾಗಿ ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ದಾಖಲಾದರು ಎಂದು ಆಪ್ತ ಮೂಲಗಳು ತಿಳಿಸಿವೆ.

ಸದ್ಯ ಮಣಿರತ್ನಂ ಅವರು 'ಪೊನ್ನಿಯಿನ್ ಸೆಲ್ವನ್' ಎಂಬ ಸಿನಿಮಾ ನಿರ್ದೇಶಿಸುತ್ತಿದ್ಧಾರೆ. ಇದು ಚಿತ್ರ ಪ್ರೇಮಿಗಳಲ್ಲಿ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಖ್ಯಾತ ಬರಹಗಾರ ಕಲ್ಕಿಯವರ 'ಪೊನ್ನಿಯಿನ್ ಸೆಲ್ವನ್' ಕಾದಂಬರಿ ಆಧರಿಸಿದ ಚಿತ್ರ ಇದಾಗಿದ್ದು, ಎ.ಆರ್.ರೆಹಮಾನ್ ಸಂಗೀತ ಹಾಗೂ ರವಿವರ್ಮನ್ ಅವರ ಛಾಯಾಗ್ರಹಣವಿದೆ. ಸೆಪ್ಟೆಂಬರ್​ 30ಕ್ಕೆ 'ಪೊನ್ನಿಯಿನ್ ಸೆಲ್ವನ್' ಚಿತ್ರ ತೆರೆಗೆ ಬರಲು ಸಜ್ಜಾಗಿದೆ.

ಇದನ್ನೂ ಓದಿ:ಡೈಲಾಗ್ ಇಲ್ಲದೇ ಆ್ಯಕ್ಷನ್ ನಿಂದಲೇ ಸೌಂಡ್ ಮಾಡುತ್ತಿರುವ ಪ್ರಜ್ವಲ್ ದೇವರಾಜ್ ''ಅಬ್ಬರ''

ABOUT THE AUTHOR

...view details