ನವದೆಹಲಿ: ನ್ಯಾಯಮೂರ್ತಿ ಅವರನ್ನು ನಿಂದಿಸಿದ ಪ್ರಕರಣದಲ್ಲಿ ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಕ್ಷಮೆಯಾಚಿಸಿದ್ದಾರೆ.
ಭೀಮಾ ಕೊರೆಂಗಾವ್ ಹಿಂಸಾಚಾರ ಪ್ರಕರಣದಲ್ಲಿ, ಸಾಮಾಜಿಕ ಹೋರಾಟಗಾರ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ್ದ ಅಂದಿನ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರ ನಿರ್ಧಾರ ಪಕ್ಷಪಾತದಿಂದ ಕೂಡಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು.
ಭೀಮಾ ಕೊರೆಂಗಾವ್ ಹಿಂಸಾಚಾರ ಪ್ರಕರಣದಲ್ಲಿ, ಸಾಮಾಜಿಕ ಹೋರಾಟಗಾರ ಗೌತಮ್ ನವಲಖ ಅವರಿಗೆ ಜಾಮೀನು ನೀಡಿದ ಅಂದಿನ ನ್ಯಾಯಮೂರ್ತಿಗಳಾದ ಎಸ್ . ಮುರಳೀಧರ್ ಅವರ ನಿರ್ಧಾರ ಪಕ್ಷಪಾತದಿಂದ ಕೂಡಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ನ್ಯಾಯಮೂರ್ತಿ ಎಸ್ ಮುರಳೀಧರ್ ಅವರ ಬಗ್ಗೆ 2018ರಲ್ಲಿ ಪೋಸ್ಟ್ ಮಾಡಿದ ಟ್ವೀಟ್‌ಗಳಿಗೆ ಈಗ ಬೇಷರತ್ ಕ್ಷಮೆಯಾಚಿಸಿದ್ದಾರೆ.
ಇಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ತಲ್ವಂತ್ ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಕ್ಷಮೆಯಾಚನೆ ಸಲ್ಲಿಸಲಾಯಿತು. ಮಾರ್ಚ್ 16, 2023 ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪೀಠವು ಅಗ್ನಿಹೋತ್ರಿಯವರಿಗೆ ಆದೇಶ ನೀಡಿದೆ.
ಇದನ್ನೂ ಓದಿ:'ಪಠಾಣ್' ಪೋಸ್ಟರ್ ರಿಲೀಸ್.. ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು