ಹೈದರಾಬಾದ್ :ಖ್ಯಾತ ನಟಿ ಸಾಯಿ ಪಲ್ಲವಿ ವಿರುದ್ಧ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಸಾಯಿ ಪಲ್ಲವಿ ಸಂದರ್ಶನವೊಂದರಲ್ಲಿ ಕಾಶ್ಮೀರಿ ಫೈಲ್ಸ್ ಚಿತ್ರದ ಕುರಿತು ಧಾರ್ಮಿಕ ಸಂಘರ್ಷದ ಬಗ್ಗೆ ಮಾತಾನಾಡಿದ್ದಾರೆ.
ಚಿತ್ರವನ್ನು ಧಾರ್ಮಿಕ ಸಂಘರ್ಷದ ದೃಷ್ಟಿಯಿಂದ ನೀವು ನೋಡುತ್ತೀರಿ ಎಂದಾದರೆ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋವು ಕಳ್ಳಸಾಗಾಣಿಕೆ ಎರಡು ಒಂದೇ ಎಂದು ನೀಡಿದ್ದ ಹೇಳಿಕೆಯೇ ವಿವಾದಕ್ಕೆ ಕಾರಣವಾಗಿದೆ.
ಅವರ ಈ ಹೇಳಿಕೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗಳಾಗುತ್ತಿವೆ. ಇದೀಗ ನಟಿಯ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯೂಟ್ಯೂಬ್ ಸಂದರ್ಶನವೊಂದರಲ್ಲಿ ಕಾಶ್ಮೀರ್ ಫೈಲ್ಸ್ನಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎನ್ನುವುದು ನೋಡಿದ್ದೇವೆ.