ಕರ್ನಾಟಕದ ರಾಜರತ್ನ, ಅಭಿಮಾನಿಗಳ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕನಸಿನ ಕೂಸು ಗಂಧದ ಗುಡಿ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಹಬ್ಬ ಆಚರಿಸುವುದಕ್ಕೆ ಸಜ್ಜಾಗಿದ್ದಾರೆ. ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಕರ್ನಾಟಕದಾದ್ಯಂತ ವಿನೂತನ ಪ್ರಚಾರ ಮಾಡಲು ಸಜ್ಜಾಗಿದ್ದು, ಅಪ್ಪು ಹೆಸರಲ್ಲಿ ಫುಡ್ ಫೆಸ್ಟಿವಲ್ ನಡೆಯಲಿದೆ.
ಹೌದು, ಅಕ್ಟೋಬರ್ 29ಕ್ಕೆ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಒಂದು ವರ್ಷವಾಗಲಿದೆ. ಈ ಹಿನ್ನೆಲೆ ಅಕ್ಟೋಬರ್ 28ರಂದು ಅಪ್ಪು ಕನಸು ಗಂಧದಗುಡಿ ಬೆಳ್ಳಿತೆರೆಯಲ್ಲಿ ಅನಾವರಣವಾಗಲಿದೆ. ಹಾಗಾಗಿ ಪುನೀತ್ ರಾಜ್ಕುಮಾರ್ ಅವರ ಅಸಂಖ್ಯಾತ ಅಭಿಮಾನಿಗಳು ಅಕ್ಟೋಬರ್ 21ರಂದು 'ಗಂಧದಗುಡಿ' ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದ ಬೆನ್ನಲ್ಲಿಯೇ ಅಪ್ಪು ಹೆಸರಿನಲ್ಲಿ ಫುಡ್ ಫೆಸ್ಟಿವಲ್ ಮಾಡಲು ಮುಂದಾಗಿದ್ಧಾರೆ. ಅಕ್ಟೋಬರ್ 22 ಹಾಗೂ 23ರಂದು ಪುನೀತ್ ಫುಡ್ ಫೆಸ್ಟಿವಲ್ ಹಮ್ಮಿಕೊಂಡಿದ್ಧಾರೆ.
ಕರ್ನಾಟಕದ ಮೂಲೆ ಮೂಲೆಯಲ್ಲಿ ಪುನೀತ್ ಫುಡ್ ಫೆಸ್ಟಿವಲ್ ಆಯೋಜನೆ ಮಾಡಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲೂ ಎಷ್ಟು ಸಾಧ್ಯವೋ ಅಷ್ಟು ಹೊಟೇಲ್‌ಗಳಲ್ಲಿ ಪುನೀತ್ ರಾಜ್‌ಕುಮಾರ್ ಇಷ್ಟು ಪಡುತ್ತಿದ್ದ ಆಹಾರವನ್ನು ಸಿದ್ಧಪಡಿಸಲಿದ್ದಾರೆ. ಈ ಮೆನುಗಳಿಗೆ (food menu) 'ಫ್ಲೇವರ್ಸ್ ಆಫ್ ಗಂಧದ ಗುಡಿ' ಎಂದು ಹೆಸರಿಡಲಾಗಿದೆ. ಸಸ್ಯಾಹಾರಿ ಹೋಟೆಲ್‌ಗಳಲ್ಲಿ ವೆಜ್ ಮೆನು ಹಾಗೂ ಮಾಂಸಹಾರಿ ಹೊಟೇಲ್‌ಗಳಲ್ಲಿ ನಾನ್ ವೆಜ್ ಮೆನು ಇರುತ್ತದೆ. ಈ ಆಹಾರವನ್ನು ಹಣ ನೀಡಿ ಜನರು ಸವಿಯಬಹುದು.
ಇದನ್ನೂ ಓದಿ:ಹೆಡ್ ಬುಷ್ ಪ್ರಚಾರ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಸೈಕಲ್ ರ‍್ಯಾಲಿ ಮಾಡಿದ ಡಾಲಿ & ಟೀಮ್