ಕನ್ನಡ ಚಿತ್ರರಂಗದಲ್ಲಿ 2008ರಲ್ಲಿ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ ಸಿನಿಮಾ ಗಾಳಿಪಟ. ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಯೋಗರಾಜ್ ಭಟ್ ಕಾಂಬಿನೇಷನ್ನಲ್ಲಿ ಮೂಡಿಬಂದ ಈ ಸಿನಿಮಾ ಸೂಪರ್ ಹಿಟ್ ಆಗುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಕಲೆಕ್ಷನ್ ಮಾಡಿತ್ತು. ಇದೀಗ ಗಾಳಿಪಟ 2 ಸಿನಿಮಾ ರಿಲೀಸ್ ಆಗುತ್ತಿದ್ದು, ನಟ ಗಣೇಶ್, ನಿರ್ದೇಶಕ ಯೋಗರಾಜ್ ಭಟ್ ಜೋಡಿ ಮತ್ತೆ ಸಿಲ್ವರ್ ಸ್ಕ್ರೀನ್ ಮೇಲೆ ಮ್ಯಾಜಿಕ್ ಮಾಡಲು ಸಜ್ಜಾಗಿದೆ.
ಜುಲೈ 2ಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ. ಹೀಗಾಗಿ, ನಿನ್ನೆಯಷ್ಟೇ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆಯುವ ಮುಖಾಂತರ ನಾನು ಈ ವರ್ಷ ಮನೆಯಲ್ಲಿ ಇರುವುದಿಲ್ಲ. ಅದಕ್ಕಾಗಿ ಅಭಿಮಾನಿಗಳು ಯಾರೂ ಮನೆ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
ಚಿತ್ರತಂಡದಿಂದ ವಿಶೇಷ ಉಡುಗೊರೆ: ಈ ಹಿನ್ನೆಲೆಯಲ್ಲಿ ಗಾಳಿಪಟ 2 ಚಿತ್ರತಂಡ ಗಣೇಶ್ ಬರ್ತ್ ಡೇಗೂ ಎರಡು ದಿನ ಮುಂಚಿತವಾಗಿ ಸ್ಪೆಷಲ್ ಉಡುಗೊರೆ ನೀಡಲಿದೆ. ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ರಮೇಶ್ ರೆಡ್ಡಿ, ಕ್ಯಾಮರಾಮ್ಯಾನ್ ಸಂತೋಷ್ ರೈ ಪಾತಾಜೆ, ಗಾಳಿಪಟ- 2 ಚಿತ್ರದ 'ನಾನಾಡದ ಮಾತೆಲ್ಲವ' ಎಂಬ ರೊಮ್ಯಾಂಟಿಕ್ ಹಾಡಿನ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಿದರು.