ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್, ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿದ್ದಾರೆ. ಅದರಲ್ಲಿ ಬಹುನಿರೀಕ್ಷಿತ 'ಗಣ' ಸಿನಿಮಾ ಕೂಡ ಒಂದು. ಇದೀಗ ಈ ಚಿತ್ರದ ರೊಮ್ಯಾಂಟಿಕ್ ಹಾಡೊಂದು ರಿಲೀಸ್ ಆಗಿದೆ. 'ಶೀ ಈಸ್ ಇನ್ ಲವ್' ಎಂಬ ಸುಮಧುರ ಹಾಡಿಗೆ ಜನರು ಫಿದಾ ಆಗಿದ್ದಾರೆ.
ಈ ಹಾಡನ್ನು ಗೀತರಚನೆಕಾರ ಪ್ರಮೋದ್ ಮರವಂತೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜಿಸಿದ್ದು, ಪ್ರಜ್ವಲ್ ದೇವರಾಜ್ ಹಾಗೂ ಯಶ ಶಿವಕುಮಾರ್ ಹೆಜ್ಜೆ ಹಾಕಿದ್ದಾರೆ. ಹಾಡು ತುಂಬಾ ಸುಂದರವಾಗಿ ಮತ್ತು ಮಧುರವಾಗಿ ಮೂಡಿಬಂದಿದೆ.
ಪ್ರಜ್ವಲ್ ದೇವರಾಜ್ ಅವರು ಲವ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್, ಥ್ರಿಲ್ಲರ್ ಹೀಗೆ ನಾನಾ ಬಗೆಯ ಪಾತ್ರಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ಅವರ ನಟನೆಯ ಕೆಲವು ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಹಲವು ಚಿತ್ರೀಕರಣ ಹಂತದಲ್ಲಿವೆ. ಅಲ್ಲದೇ ಮೊದಲ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಗ್ರೀನ್ ಸಿಗ್ನಲ್ ಕೂಡ ಕೊಟ್ಟಿದ್ದಾರೆ. ಸರಣಿ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪ್ರಜ್ವಲ್ ದೇವರಾಜ್ ಮುಖ್ಯಭೂಮಿಕೆಯ ಗಣ ಸಿನಿಮಾ ಶೀಘ್ರದಲ್ಲೇ ತೆರೆಕಾಣಲಿದೆ.
ಇದನ್ನೂ ಓದಿ:ಮುಂದಿನ ವರ್ಷ ತೆರೆ ಕಾಣಲಿದೆ 'ಆರಾಮ್ ಅರವಿಂದ್ ಸ್ವಾಮಿ' ಚಿತ್ರ