ಕರ್ನಾಟಕ

karnataka

ETV Bharat / entertainment

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ.. ಅ. 9ಕ್ಕೆ ಗಂಧದ ಗುಡಿ ಟ್ರೈಲರ್ ಬಿಡುಗಡೆ - ashwini puneeth rajkumar

ಗಂಧದ ಗುಡಿ ಸಿನಿಮಾದ ಟ್ರೈಲರ್ ಅಕ್ಟೋಬರ್ 9 ರಂದು ಬಿಡುಗಡೆಯಾಗಲಿದೆ.

Gandhada gudi movie tailor will release on October 9th
ಅ. 9ಕ್ಕೆ ಗಂಧದ ಗುಡಿ ಟ್ರೈಲರ್ ಬಿಡುಗಡೆ

By

Published : Oct 7, 2022, 3:15 PM IST

ದಿವಗಂತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಗಂಧದ ಗುಡಿ ಸಿನಿಮಾದ ಟ್ರೈಲರ್ ಅಕ್ಟೋಬರ್ 9 ರಂದು ಬಿಡುಗಡೆಯಾಗಲಿದೆ. ಈ ಬಗ್ಗೆ ಸ್ವತಃ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​, ನಟ ಮತ್ತು ಸಂಬಂಧಿ ಯುವ ರಾಜ್​​ಕುಮಾರ್​ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಒಂದು ಅದ್ಭುತ ಪಯಣಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದೆ. ಗಂಧದ ಗುಡಿ ಟ್ರೈಲರ್ ಇನ್ನೆರೆಡು ದಿನಗಳಲ್ಲಿ ನಿಮ್ಮ ಮುಂದೆ. @PRKAudio ಯೂಟ್ಯೂಬ್ ಚಾನೆಲ್​ನಲ್ಲಿ ಎಂದು ಅಶ್ವಿನಿ ಪುನೀತ್​ ರಾಜ್​ಕುಮಾರ್ ಟ್ವೀಟ್ ಮಾಡಿದ್ದಾರೆ.

ಬೆಳ್ಳಿ ತೆರೆಯ ಮೇಲೆ ಅಪ್ಪು ಚಿಕ್ಕಪ್ಪ ಅವರ ಅಂತಿಮ ಚಿತ್ರ ನೋಡಲು ಕಾತರದಿಂದ ಕಾಯುತ್ತಿದ್ದೇನೆ. ಒಂದು ಅದ್ಭುತ ಪಯಣಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದೆ. ಗಂಧದಗುಡಿ ಟ್ರೈಲರ್ 9ರಂದು ಬೆಳಗ್ಗೆ 10:19 ಕ್ಕೆ @prk.audio ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್​ ಆಗಲಿದೆ ಎಂದು ನಟ ಯುವ ರಾಜ್​​ಕುಮಾರ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​​ ಎವರ್ ಗ್ರೀನ್ ಹೀರೋ ಅನಂತ್ ನಾಗ್​ಗೆ ಗೌರವ ಡಾಕ್ಟರೇಟ್

ಇನ್ನೂ ಈ ವರ್ಷದ ನಾಡಹಬ್ಬ ರಾಜ್ಯೋತ್ಸವವನ್ನು ಅಪ್ಪುವಿನ ಗಂಧದ ಗುಡಿಯೊಂದಿಗೆ ಆಚರಿಸಲು ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 28, 2022 ರಂದು ಗಂಧದ ಗುಡಿ ಸಿನಿಮಾ ಬಿಡುಗಡೆಯಾಗುತ್ತಿದೆ. ಅಪ್ಪು ಕೊನೆಯದಾಗಿ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿರುವ ಚಿತ್ರವಿದು. ರಾಷ್ಟ್ರ ಪ್ರಶಸ್ತಿ ಪಡೆದ ವನ್ಯಜೀವಿ ಚಿತ್ರ ನಿರ್ದೇಶಕ ಅಮೋಘವರ್ಷ ನಿರ್ದೇಶನದ ಚಲನಚಿತ್ರ ಇದಾಗಿದೆ

ABOUT THE AUTHOR

...view details