ಕರ್ನಾಟಕ

karnataka

ETV Bharat / entertainment

ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಗಟ್ಟಿಮೇಳ ಧಾರಾವಾಹಿಯ ವೇದಾಂತ್: ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಜೇಮ್ಸ್ ಡೈರೆಕ್ಟರ್ - gattimela serial actor raksh

ಚೇತನ್ ಕುಮಾರ್ ನಿರ್ದೇಶನದ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಗಟ್ಟಿಮೇಳ ಧಾರಾವಾಹಿಯ ರಕ್ಷ್​​ ನಟಿಸಲಿದ್ದಾರೆ.

raksh new movie announced
ಚೇತನ್ ರಕ್ಷ್ ಕಾಂಬೋದಲ್ಲಿ ಬರ್ಮ ಸಿನಿಮಾ

By ETV Bharat Karnataka Team

Published : Aug 25, 2023, 2:07 PM IST

ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳ ಸಾರಥಿ ಚೇತನ್ ಕುಮಾರ್ ನಿರ್ದೇಶನದ ಹೊಸ ಸಿನಿಮಾ ಇಂದು ಅನೌನ್ಸ್​ ಆಗಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ರಿವೀಲ್ ಮಾಡಿದೆ. 'ಬರ್ಮ' ಎಂಬ ವಿಭಿನ್ನ ಶೀರ್ಷಿಕೆ ಹೊಂದಿರುವ ಸಿನಿಮಾಗೆ ಗಟ್ಟಿಮೇಳ ಧಾರಾವಾಹಿಯ ರಕ್ಷ್ ನಾಯಕ ನಟ.

ಬರ್ಮ ಸಿನಿಮಾ: ಸಂಸ್ಕೃತದಲ್ಲಿ ಬರ್ಮ ಅಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ. ಇದೊಂದು ಆ್ಯಕ್ಷನ್ ಎಂಟರ್​​ಟೈನರ್ ಸಿನಿಮಾ ಆಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರಲಿದೆ. ವಿ. ಹರಿಕೃಷ್ಣ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ ಹಾಗೂ ಚೇತನ್ ಜೋಡಿ ಮೂರನೇ ಬಾರಿಗೆ ಚಿತ್ರವೊಂದಕ್ಕೆ ಒಂದಾಗುತ್ತಿರುವುದು ಸಹಜವಾಗಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

ರಕ್ಷ್ ಮೊದಲ ಪ್ಯಾನ್ ಇಂಡಿಯಾ ಸಿನಿಮಾ: ಬರ್ಮ ಸಿನಿಮಾ ಅನೌನ್ಸ್ ಆದ ದಿನವೇ ಆಡಿಯೋ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಇದಪ್ಪ ಚೇತನ್ ಸಿನಿಮಾಗಳ ರೆಕಾರ್ಡ್ ಎನ್ನುತ್ತಿದ್ದಾರೆ ಗಾಂಧಿನಗರದ ಮಂದಿ. ಈಗಾಗಲೇ ರಕ್ಷ್ ರಾಮ್ ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದು, ಬರ್ಮ ಮೂಲಕ ಪ್ಯಾನ್ ಇಂಡಿಯಾ ಪ್ರಪಂಚದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಸೆಪ್ಟೆಂಬರ್​ನಿಂದ ಶೂಟಿಂಗ್ ಶುರು: ನಿರ್ದೇಶಕ ಚೇತನ್ ಕುಮಾರ್ ಪ್ರತೀ ಸಿನಿಮಾದಲ್ಲಿ ಹೊಸತನ ಹೊತ್ತು ತರುತ್ತಾರೆ. ಅದೇ ನಿರೀಕ್ಷೆ ಬರ್ಮ ಸಿನಿಮಾ ಮೇಲೆಯೂ ಇದೆ. ಮುಂದಿನ ತಿಂಗಳು ಸೆಪ್ಟೆಂಬರ್​ನಿಂದ ಶೂಟಿಂಗ್ ಅಖಾಡಕ್ಕೆ ಚಿತ್ರತಂಡ ಧುಮುಕಲಿದೆ. ಇನ್ನುಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಒಂದೊಂದಾಗಿ ಚಿತ್ರತಂಡ ನೀಡಲಿದೆ.

ಗಟ್ಟಿಮೇಳ ಮೂಲಕ ರಕ್ಷ್ ಜನಪ್ರಿಯ: ರಕ್ಷ್ ಸದ್ಯ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗಟ್ಟಿಮೇಳ ಧಾರಾವಾಹಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಹುಸಮಯದಿಂದ ಮೂಡಿ ಬರುತ್ತಿರುವ ಈ ಸೀರಿಯಲ್​ ಕನ್ನಡಿಗರ ಮನೆ ಮಾತಾಗಿದೆ. ವೇದಾಂತ್​ ವಸಿಷ್ಠ ಪಾತ್ರದಲ್ಲಿ ರಕ್ಷ್ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಪುಟ್ಟ ಗೌರಿ ಮದುವೆ ಸೀರಿಯಲ್​ನಲ್ಲಿ ಅಭಿನಯಿಸಿದ್ದರು. ಕೆಲ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರೂ ದೊಡ್ಡ ಮಟ್ಟದ ಯಶಸ್ಸು ಕಂಡಿಲ್ಲ. ಇದೀಗ ಅದ್ಧೂರಿಯಾಗಿ ನಿರ್ಮಾಣ ಆಗಲಿರುವ ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:2ನೇ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ ದಂಪತಿ - ಸ್ಪೆಷಲ್​​ ಪೋಸ್ಟ್ ಶೇರ್ ಮಾಡಿದ ಆ್ಯಕ್ಷನ್​ ಪ್ರಿನ್ಸ್

ಬಹುಕಾಲದ ಗೆಳತಿ ಅನುಷಾ ಕೈ ಹಿಡಿದು ಸುಖ ಸಂಸಾರ ನಡೆಸುತ್ತಿರುವ ರಕ್ಷ್ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಷೀವ್​​. ಆಗಾಗ್ಗೆ ಫೋಟೋ ಹಂಚಿಕೊಳ್ಳುವ ಮೂಲಕ ಯುವತಿಯರ ಕಣ್ಮನ ಆವರಿಸುತ್ತಾರೆ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಇವರ ಲುಕ್​​ಗೆ ಮನಸೋಲದವರಿಲ್ಲ. ಪ್ಯಾನ್​ ಇಂಡಿಯಾ ಸಿನಿಮಾಗೆ ರೆಡಿ ಆಗ್ತಿದ್ದಾರೆ ಅಂದ್ರೆ ಸಿನಿಮಾ ಹೇಗಿರಬಹುದು ಎಂದು ಅಭಿಮಾನಿಗಳು ಅಂದಾಜಿಸುತ್ತಿದ್ದಾರೆ.

ಇದನ್ನೂ ಓದಿ:ಸಿನಿಮಾ ಹೊರತಾಗಿ ಯಾವುದೂ ಕೂಡ ಯಾರ ವ್ಯವಹಾರವೂ ಅಲ್ಲ: ಡೇಟಿಂಗ್​ ವದಂತಿಗೆ ಹೃತಿಕ್​ ರೋಷನ್ ಗೆಳತಿಯ ಪ್ರತಿಕ್ರಿಯೆ

ABOUT THE AUTHOR

...view details