ಶೀರ್ಷಿಕೆಯಿಂದಲೇ ಸೌತ್ ಇಂಡಸ್ಟ್ರಿಯಲ್ಲಿ ಸಖತ್ ಟಾಕ್ ಆಗುತ್ತಿರುವ ಚಿತ್ರ 'ಘೋಸ್ಟ್'. ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಗ್ಯಾಂಗ್ಸ್ಟರ್ ಆಗಿ ಕಾಣಿಸಿಕೊಂಡಿರುವ ಪ್ಯಾನ್ ಇಂಡಿಯಾ ಸಿನಿಮಾ ಇದು. ಪಾಸಿಟಿವ್ ವೈಬ್ಸ್ ಕ್ರಿಯೇಟ್ ಮಾಡಿರೋ ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಗಳಿವೆ. ಅಕ್ಟೋಬರ್ 19 ರಂದು ವಿಶ್ವಾದ್ಯಂತ ತೆರೆ ಕಾಣಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಅಕ್ಟೋಬರ್ 1 ರಂದು ಬಿಡುಗಡೆಯಾಗಲಿದೆ.
ಟೀಸರ್ನಿಂದಲೇ ಹೊಸ ಬಗೆಯ ಕ್ರೇಜ್ ಕ್ರಿಯೇಟ್ ಮಾಡಿರುವ ಘೋಸ್ಟ್ ಬಿಡುಗಡೆಗೂ ಮುನ್ನವೇ ಕೋಟಿ ಕೋಟಿ ರೂಪಾಯಿ ವ್ಯವಹಾರ ನಡೆಸಿದೆ. ಕರುನಾಡ ಚಕ್ರವರ್ತಿ ಶಿವಣ್ಣ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ, ನಿರ್ದೇಶಕ ಶ್ರೀನಿ ಆ್ಯಕ್ಷನ್ ಕಟ್ ಹೇಳಿರುವ ಚಿತ್ರದ ಪ್ರೀ ಬ್ಯುಸಿನೆಸ್ ಜೋರಾಗಿದೆ. ಜೊತೆಗೆ ಅಕ್ಟೋಬರ್ ಮೊದಲ ವಾರ ಘೋಸ್ಟ್ ಚಿತ್ರದ ಪ್ರಚಾರಕ್ಕಾಗಿ ಶಿವ ರಾಜ್ಕುಮಾರ್ ಮುಂಬೈ, ದೆಹಲಿ ಮುಂತಾದ ಕಡೆ ತೆರಳಲಿದ್ದಾರೆ.
ಸಿನಿಮಾ ಬಿಡುಗಡೆಗೂ ಮುನ್ನ 'ಘೋಸ್ಟ್' ಚಿತ್ರದ ಟ್ರೇಲರ್ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರದ ತೆಲುಗು ಟ್ರೇಲರ್ ಅನ್ನು ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಬಿಡುಗಡೆಗೊಳಿಸಲಿದ್ದಾರೆ. ಈ ವಿಚಾರವನ್ನು ತಿಳಿಸಲು ಚಿತ್ರತಂಡ ಸೋಷಿಯಲ್ ಮೀಡಿಯಾವನ್ನು ವೇದಿಕೆಯನ್ನಾಗಿ ಬಳಸಿಕೊಂಡಿದೆ.
ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ಶ್ರೀನಿ, "ಅಡ್ರಿನಾಲಿನ್-ಪ್ಯಾಕ್ಡ್ ರೈಡ್ಗೆ ಸಿದ್ಧರಾಗಿ! ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಅರ್ ಅವರು ನಮ್ಮ ಆಕ್ಷನ್ ಪ್ಯಾಕ್ಡ್ ಥ್ರಿಲ್ಲರ್ ಘೋಸ್ಟ್ನ ತೆಲುಗು ಟ್ರೇಲರ್ ಅನ್ನು ಅಕ್ಟೋಬರ್ 1 ರಂದು ಬೆಳಗ್ಗೆ 11 ಗಂಟೆಗೆ T-Series ಯೂಟ್ಯೂಬ್ ಚಾನೆಲ್ನಲ್ಲಿ ಅನಾವರಣಗೊಳಿಸಲಿದ್ದಾರೆ. set your alarms!" ಎಂದು ಬರೆದುಕೊಂಡಿದ್ದಾರೆ.