ಕರ್ನಾಟಕ

karnataka

ETV Bharat / entertainment

ಸಿನಿ ಪ್ರಿಯರ ಮನಗೆದ್ದ ಥಗ್ಸ್ ಆಫ್ ರಾಮಗಢ ಸಿನಿಮಾ.. ಉತ್ತರ ಕರ್ನಾಟಕದ ಪ್ರತಿಭೆಗಳು ಖುಷ್​ - ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ

ಕಳೆದ ವಾರವಷ್ಟೇ ತೆರೆಕಂಡಿದ್ದ ಥಗ್ಸ್ ಆಫ್ ರಾಮಗಢ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿದ್ದು, ಈ ವಾರ ಥಗ್ಸ್ ಆಫ್ ರಾಮಘಡ ಚಿತ್ರದ ಪ್ರದರ್ಶನ ಮುಂದುವರಿದಿದೆ.

Good response for Thugs of Ramaghada movie  Thugs of Ramaghada movie trailer  Thugs of Ramaghada movie response  Thugs of Ramaghada movie release date  ಸಿನಿ ಪ್ರಿಯರ ಮನಗೆದ್ದ ಥಗ್ಸ್ ಆಫ್ ರಾಮಘಡ ಸಿನಿಮಾ  ಥಗ್ಸ್ ಆಫ್ ರಾಮಘಡ ಚಿತ್ರ  ಥಗ್ಸ್ ಆಫ್ ರಾಮಘಡ ಚಿತ್ರದ ಪ್ರದರ್ಶನ  ನಿರ್ದೇಶಕ ಕಾರ್ತಿಕ್ ಮಾರಲಭಾವಿ ನಿರ್ದೇಶನ  ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿ  ಪ್ರೇಕ್ಷಕರು ಮನ ಸೋತಿದ್ದಾರೆ  ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ
ಸಿನಿ ಪ್ರಿಯರ ಮನಗೆದ್ದ ಥಗ್ಸ್ ಆಫ್ ರಾಮಘಡ ಸಿನಿಮಾ

By

Published : Jan 12, 2023, 4:32 PM IST

ನಿರ್ದೇಶಕ ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬಂದ ‘ಥಗ್ಸ್ ಆಫ್ ರಾಮಗಢ’ ಚಿತ್ರ ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ವಾರ ಬಿಡುಗಡೆಯಾದ ಥಗ್ಸ್ ಆಫ್‌ ರಾಮಗಢ ಚಿತ್ರವನ್ನ ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಈ ಚಿತ್ರ ಬಿಡುಗಡೆಯಾದ ಎಲ್ಲ ಕಡೆಗಳಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರುತ್ತಿರುವ ಉತ್ತಮ ವಿಮರ್ಶೆ ಹಾಗೂ ಪ್ರತಿಕ್ರಿಯೆ ಕಂಡು ಚಿತ್ರತಂಡ ಕೂಡ ಖುಷಿಯಾಗಿದೆ.

ಸಿನಿ ಪ್ರಿಯರ ಮನಗೆದ್ದ ಥಗ್ಸ್ ಆಫ್ ರಾಮಘಡ ಸಿನಿಮಾ

ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮಿ ಮುಖ್ಯಭೂಮಿಕೆಯಲ್ಲಿದ್ದ ಥಗ್ಸ್ ಆಫ್ ರಾಮಗಢ ಸಿನಿಮಾದಲ್ಲಿ ಈ ಮೂವರ ನಟನೆ ಅದ್ಭುತವಾಗಿದ್ದು, ಪ್ರೇಕ್ಷಕರು ಮನ ಸೋತಿದ್ದಾರೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ ಮೂಡಿಸಿದ್ದ ‘ಥಗ್ಸ್ ಆಫ್ ರಾಮಗಢ’ ಚಿತ್ರ ಕಾರ್ತಿಕ್ ಮಾರಲಭಾವಿ ನಿರ್ದೇಶನದ ಮೊದಲ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಜನವರಿ 6ರಂದು ಪ್ರೇಕ್ಷಕರೆದುರು ಬಂದ ಈ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ 1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ. ನೈಜ ಘಟನೆಗೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಜೊತೆ ತೆರೆ ಮೇಲೆ ಬಂದ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಭಾರತ್ ಟಾಕೀಸ್​ನಡಿ ಜೈ ಕುಮಾರ್, ಕೀರ್ತಿ ರಾಜ್ ಥಗ್ಸ್ ಆಫ್ ರಾಮಗಢ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಮೊದಲ ವಾರ ಸಿನಿಮಾಗೆ ಸಿಕ್ಕಿರುವ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದ್ದು, ಎರಡನೇ ವಾರದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

ಸಿನಿ ಪ್ರಿಯರ ಮನಗೆದ್ದ ಥಗ್ಸ್ ಆಫ್ ರಾಮಘಡ ಸಿನಿಮಾ

ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಿದ್ದ ಡಾಲಿ: ಹೊಸ ಟ್ಯಾಲೆಂಟ್‌ ಇರುವ ನಿರ್ದೇಶಕರು ಹಾಗೂ ಯುವ ನಟ,‌ ನಟಿಯರು ಅಭಿನಯಿಸಿರುವ ಚಿತ್ರ ಈಗ ಎರಡನೇ ವಾರದತ್ತ ಮುನ್ನುಗ್ಗುತ್ತಿದೆ. ಫಸ್ಟ್ ಲುಕ್ ಹಾಡಿನ ಮೂಲಕ ಗಮನ ಸೆಳೆದ ‘ಥಗ್ಸ್ ಆಫ್ ರಾಮಘಡ’ ಚಿತ್ರದ ಭರವಸೆ ಹೊತ್ತಿತ್ತು. ಕಾರ್ತಿಕ್ ಮಾರಲಭಾವಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರದ ಟ್ರೇಲರ್ ನಟರಾಕ್ಷಸ ಡಾಲಿ ಧನಂಜಯ ಬಿಡುಗಡೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿರುವ ಬಗ್ಗೆ ಗಮನಾರ್ಹ.

ಆಗ ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ್ದ ಡಾಲಿ ಧನಂಜಯ, ಇಡೀ ತಂಡವನ್ನು ನೋಡಿ ತುಂಬಾ ಖುಷಿ ಆಯ್ತು. ನಿರ್ದೇಶಕ ಕಾರ್ತಿಕ್ ತುಂಬಾ ಒಳ್ಳೆ ಟೀಂ ಕಟ್ಟಿಕೊಂಡು, ಒಳ್ಳೆ ಒಳ್ಳೆ ಕಲಾವಿದರನ್ನು ಇಟ್ಟುಕೊಂಡು ನೈಜ ಘಟನೆ ಆಧರಿಸಿದ ಸಿನಿಮಾ ಮಾಡಿದ್ದಾರೆ. ಚಿತ್ರದ ಪ್ರಮೋಷನ್ ಕೂಡ ತುಂಬಾ ಕ್ರಿಯೇಟಿವ್ ಆಗಿ ಮಾಡುತ್ತಿದ್ದಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆದಾಗಲಿ. ಉತ್ತರ ಕರ್ನಾಟಕ ಭಾಗದಿಂದ ಇನ್ನಷ್ಟು ನಿರ್ದೇಶಕರು, ಕಲಾವಿದರು ಚಿತ್ರರಂಗಕ್ಕೆ ಬಂದು ಆ ಭಾಗದ ಕಥೆಗಳನ್ನು ಹೇಳಲಿ ಎಂದು ಹೇಳುವ ಮೂಲಕ ಧನಂಜಯ ಚಿತ್ರ ತಂಡಕ್ಕೆ ಶುಭ ಕೋರಿದ್ದರು.

ಓದಿ:ಉ.ಕರ್ನಾಟಕದಿಂದ ಇನ್ನಷ್ಟು ಪ್ರತಿಭೆಗಳು ಚಿತ್ರರಂಗಕ್ಕೆ ಬರಲಿ: ಥಗ್ಸ್ ಆಫ್ ರಾಮಘಡ ಚಿತ್ರಕ್ಕೆ ಡಾಲಿ ಸಾಥ್

ABOUT THE AUTHOR

...view details