ಕರ್ನಾಟಕ

karnataka

ETV Bharat / entertainment

ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್.. - ಗುರುದತ್ ಗಾಣಿಗ

Prajwal Devaraj's 40th movie: ನಟ ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ 'ಅಂಬಿ ನಿಂಗೆ ವಯಸಾಯ್ತೋ' ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

Prajwal Devaraj's 40th movie
ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್

By ETV Bharat Karnataka Team

Published : Oct 16, 2023, 1:19 PM IST

ಲವರ್ ಬಾಯ್ ಹಾಗೂ ತನ್ನದೇ ಅಭಿನಯದ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ನಟ ಪ್ರಜ್ವಲ್ ದೇವರಾಜ್. ಇದೀಗ ನವರಾತ್ರಿಯ ಹಬ್ಬಕ್ಕೆ ಪ್ರಜ್ವಲ್​ ಹೊಸ ಸಿನಿಮಾ ಅನೌಸ್ ಆಗಿದೆ. ಇದು ಪ್ರಜ್ವಲ್ ನಟನೆಯ 40ನೇ ಸಿನಿಮಾ. ಈಗಾಲೇ ಪ್ರಜ್ವಲ್ ಬಳಿ 'ಮಾಫಿಯಾ' ಸೇರಿದಂತೆ ಇನ್ನೂ ಹೆಸರಿಡದ ಎರಡು ಚಿತ್ರಗಳಿವೆ. ಇದೀಗ 40ನೇ ಸಿನಿಮಾ ಅನೌನ್ಸ್ ಆಗಿದೆ.

ನಿರ್ದೇಶಕ ಗುರುದತ್ ಗಾಣಿಗ

ಸದ್ಯ ಪೋಸ್ಟರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಹೊಸ ಸಿನಿಮಾಗೆ ಇನ್ನೂ ಟೈಟಲ್ ಫೈನಲ್ ಆಗಿಲ್ಲ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ಭರ್ಜರಿಯಾಗಿ ಮೂಡಿ ಬಂದಿದ್ದು, ಭಾರಿ ಕುತೂಹಲ ಹೆಚ್ಚಿಸಿದೆ. ಪ್ರಜ್ವಲ್ ಸಿನಿ ಜೀವನದಲ್ಲೇ ಇದೊಂದು ವಿಭಿನ್ನವಾದ ಸಿನಿಮಾ ಆಗಲಿದೆ. ಇದುವರೆಗೂ ಕಾಣಿಸಿಕೊಳ್ಳದೇ ಇರುವ ಪಾತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ.

ನಟ ಪ್ರಜ್ವಲ್ ದೇವರಾಜ್

ಪ್ರಜ್ವಲ್ ದೇವರಾಜ್ ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನ:ಪ್ರಜ್ವಲ್ ದೇವರಾಜ್ ಅವರ 40ನೇ ಸಿನಿಮಾಗೆ 'ಅಂಬಿ ನಿಂಗೆ ವಯಸಾಯ್ತೋ' ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಗುರುದತ್ ನಿರ್ದೇಶನದ ಎರಡನೇ ಸಿನಿಮಾವಾಗಿದೆ. ಮೊದಲ ಸಿನಿಮಾ 'ಅಂಬಿ ನಿಂಗೆ ವಯಸಾಯ್ತೋ' 2018 ರಲ್ಲಿ ಬಿಡುಗಡೆಯಾಗಿತ್ತು. ಬಳಿಕ ಗುರುದತ್ ಯಾವುದೇ ಸಿನಿಮಾ ಮಾಡಿರಲಿಲ್ಲ. ಮೊದಲ ಸಿನಿಮಾದಲ್ಲೇ ರೆಬಲ್ ಸ್ಟಾರ್ ಅಂಬರೀಶ್, ಕಿಚ್ಚ ಸುದೀಪ್, ಸುಹಾಸಿನಿ ಅಂತಹ ದೊಡ್ಡ ದೊಡ್ಡ ಸ್ಟಾರ್ ಕಲಾವಿದರಿಗೆ ನಿರ್ದೇಶನ ಮಾಡಿದ್ದ ಗುರು, ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಆ ಎಲ್ಲ ಕುತೂಹಲ ಹಾಗೂ ಪ್ರಶ್ನೆಗಳಿಗೆ ತೆರೆ ಬಿದ್ದಿದೆ.

ಪ್ರಜ್ವಲ್ ದೇವರಾಜ್ 40ನೇ ಸಿನಿಮಾ

ಶೀಘ್ರವೇ ಟೈಟಲ್, ಟೀಸರ್ ಬಿಡುಗಡೆ:ಸಿನಿಮಾದ ಪೋಸ್ಟರ್ ನೋಡಿದ್ದರೆ ಇದು ಕಂಬಳದ ಬಗ್ಗೆ ಇರುವ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಈ ಮೂಲಕ ಕರಾವಳಿ ಭಾಗದ ಮತ್ತೊಂದು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲು ಸಜ್ಜಾಗುತ್ತಿದೆ. ಈ ಚಿತ್ರವು ವಿಕೆ ಫಿಲ್ಮ್ಸ್ ಹಾಗೂ ಗುರುದತ್ ಗಾಣಿಗ ನಿರ್ಮಾಣದಲ್ಲಿ ಮೂಡಿ ಬರುತ್ತಿದೆ. ಗುರು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಸಿನಿಮಾಕ್ಕೆ ಸಚಿನ್ ಬಸ್ರೂರು ಸಂಗೀತವಿದೆ. ಅಭಿಮನ್ಯು ಸಧಾನಂದ್ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿಗಿದೆ. ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಸದ್ಯದಲ್ಲೇ ಟೈಟಲ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ.

ಇದನ್ನೂ ಓದಿ:ಅನಿರುದ್ಧ್​ ರವಿಚಂದರ್​ ಕೈಹಿಡಿದು 'ಲಿಯೋ' 'locked and loaded' ಎಂದ ಲೋಕೇಶ್​ ಕನಕರಾಜ್​

ABOUT THE AUTHOR

...view details