ಡಾಲಿ ಧನಂಜಯ್ ಅಭಿನಯದ ಬಹು ನಿರೀಕ್ಷಿತ ಹೆಡ್ ಬುಷ್ ಚಿತ್ರದ ಟ್ರೈಲರ್ ಭಾನುವಾರ ಬಿಡುಗಡೆಯಾಗಿದ್ದು, ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಚಿತ್ರ ಯಶಸ್ಸು ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಭಾನುವಾರ ಸಾಯಂಕಾಲ ಬಿಡುಗಡೆಯಾಗಿರುವ ಟ್ರೈಲರ್ ಈಗಾಗಲೇ 1 ಮಿಲಿಯನ್ ವೀವ್ಸ್ ಪಡೆದು, ಮುನ್ನುಗ್ಗುತ್ತಿದೆ.
ಭೂಗತ ಲೋಕದ ದೊರೆ ಎಂ.ಪಿ ಜಯರಾಜ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಶೂನ್ಯ ಅವರು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. 1970 ದಶಕದ ಬೆಂಗಳೂರಿನ ಭೂಗತ ಜಗತ್ತನ್ನು ಚಿತ್ರದಲ್ಲಿ ತೆರೆದಿಡಲಾಗಿದೆ. ಇನ್ನೂ ಜಯರಾಜ್ ಪಾತ್ರದಲ್ಲಿ ಡಾಲಿ ಮಿಂಚಿದ್ದು, ಡಾಲಿ ನಟನೆಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.